ಪಾಲಾರ್ ಪತ್ರಿಕೆ | Palar Pathrike
ಚಿಕ್ಕಬಳ್ಳಾಪುರ: 2023 ಸರ‍್ವತ್ರಿಕ ಚುನಾವಣಾ ಸಂರ‍್ಭದಲ್ಲಿ ಚುನಾವಣಾ ಪ್ರಚಾರ ಕರ‍್ಯಕ್ಕೆ 18 ರ‍್ಷಕ್ಕಿಂತ ಕೆಳಗಿರುವ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ.
ಭಾರತ ರ‍್ಕಾರವು ವಿಶ್ವಸಂಸ್ಥೆಯ ಅನುಮೋದಿತ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ 1992 ರ ಡಿ.11 ರಂದು ಒಪ್ಪಿ ಅನುಮೋದಿಸಿದ್ದು ಈ ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ ಕಾಯ್ದೆ) 2015 ರ ಅನ್ವಯ 18 ರ‍್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 23 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರದಲ್ಲಿ ಮಕ್ಕಳು ಕರ‍್ಯನರ‍್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನರ‍್ದೇಶಿಸಿದೆ.
ಅದರಂತೆ ಮುಂಬರುವ ರ‍್ನಾಟಕ ರಾಜ್ಯ ವಿಧಾನಸಭಾ ಸರ‍್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕರ‍್ಯಗಳಲ್ಲಿ (ಪ್ರಚಾರ ಹಾಗೂ ಇನ್ನಿತರೆ) ಯಾವುದೇ ಪಕ್ಷಗಳು 18 ರ‍್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ.ಆದಾಗ್ಯೂ ಮಕ್ಕಳನ್ನು ಚುನಾವಣಾ ಕರ‍್ಯದಲ್ಲಿ ಬಳಸಿಕೊಂಡಲ್ಲಿ ಕಾಯ್ದೆಯನ್ವಯ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕರ‍್ಮಿಕ ಯೋಜನಾ ಸೊಸೈಟಿ ಅಧ್ಯಕ್ಷರಾದ ಎನ್.ಎಮ್ ನಾಗರಾಜ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.