Friday, May 3, 2024
spot_img
HomeChikballapurಚಿಕ್ಕಬಳ್ಳಾಪುರದಲ್ಲಿ ಡಿ.1 ರಂದು ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ

ಚಿಕ್ಕಬಳ್ಳಾಪುರದಲ್ಲಿ ಡಿ.1 ರಂದು ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ


ಪಾಲಾರ್ ಪತ್ರಿಕೆ | Palar Patrike

ಚಿಕ್ಕಬಳ್ಳಾಪುರ: ಹೆಚ್.ಐ.ವಿ. ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲು  ಡಿಸೆಂಬರ್ 1 ರಂದು ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ರಾಜ್ಯ ಮಟ್ಟದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಮ್.ನಾಗರಾಜ್ ಅವರು ತಿಳಿಸಿದರು.  
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ವಿಶ್ವ ಏಡ್ಸ್ ದಿನಾಚರಣೆಯ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 2022 ನೇ ಸಾಲಿನಲ್ಲಿ “ಸಮಾನಗೊಳಿಸು” (ನಮ್ಮೆಲ್ಲರ ಪ್ರಾಮಾಣಿಕ ಪ್ರಯತ್ನದಿಂದ ಅಸಮಾನತೆಯನ್ನು ಪರಿಹರಿಸೋಣ ಮತ್ತು ಏಡ್ಸ್ ಅನ್ನು ಕೊನೆಗೊಳಿಸೋಣ) ಎಂಬ ಘೋಷವಾಕ್ಯದೊಂದಿಗೆ ಈ ಬಾರಿ ಜಿಲ್ಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆಯ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಸರ್ಕಾರದ ನಿರ್ದೇಶನದಂತೆ ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಹಂಚಿಕೆ ಮಾಡಿ ಜವಬ್ದಾರಿ ವಹಿಸಿದರು.ಡಿಸೆಂಬರ್ 1 ರಂದು ಬೆಳಿಗ್ಗೆ 9:30 ಗಂಟೆಗೆ ನಗರದ ಶಿಡ್ಲಘಟ್ಟ ವೃತ್ತದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಮೆರವಣಿಗೆ ಕೈಗೊಂಡು ಸಾರ್ವಜನಿಕರಿಗೆ ಏಡ್ಸ್ ಜಾಗೃತಿ ಮೂಡಿಸಬೇಕು ಜೊತೆಗೆ ನಗರದ ಜೂನಿಯರ್ ಕಾಲೇಜು ಆವರಣ, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗ ಹಾಗೂ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಐ.ಇ.ಸಿ ಮಳಿಗೆಗಳನ್ನು ತೆರೆದು ಹೆಚ್.ಐ.ವಿ ಸೋಂಕನ್ನು  ಸಂಪೂರ್ಣವಾಗಿ ತಡೆಗಟ್ಟುವ ವಿಧಾನಗಳ ಕುರಿತು ಕರಪತ್ರಗಳು, ಭಿತ್ತಿಪತ್ರಗಳನ್ನು ಹಂಚುವುದು ಹಾಗೂ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸಿದರು. 
ಜಿಲ್ಲೆಯಲ್ಲಿ ಹೆಚ್.ಐ.ವಿ ಸೋಂಕಿಗೆ ಈವರೆಗೆ ಒಟ್ಟು 5,223 ಜನರು ಒಳಗಾಗಿದ್ದು ಈ ಪೈಕಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ 1,033, ಚಿಂತಾಮಣಿ ತಾಲ್ಲೂಕಿನಲ್ಲಿ 1,169, ಬಾಗೇಪಲ್ಲಿ ತಾಲ್ಲೂಕಿನಲ್ಲಿ 943, ಗೌರಿಬಿದನೂರು ತಾಲ್ಲೂಕಿನಲ್ಲಿ 1,021, ಗುಡಿಬಂಡೆ ತಾಲ್ಲೂಕಿನಲ್ಲಿ 383 ಹಾಗೂ ಶಿಡ್ಲಘಟ್ಟ ತಾಲ್ಲೂಕಿನಲ್ಲಿ 674 ಜನರು ಹೆಚ್.ಐ.ವಿ ಸೋಂಕಿಗೆ  ಒಳಗಾಗಿದ್ದಾರೆ. ಪ್ರಸ್ತುತ 2,797 ಸೋಂಕಿತರು ತಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಸೋಂಕಿತರಿಂದ ಮತ್ತೊಬ್ಬರಿಗೆ ಸೋಂಕು ಹರಡದಂತೆ ಅನುಸರಿಸಬೇಕಾದ ವಿಧಾನಗಳ ಬಗ್ಗೆ ಸೋಂಕಿತರಿಗೆ ಅರಿವು ನೀಡಲಾಗುತ್ತಿದೆ. ಜೊತೆಗೆ ಮುನ್ನೇಚ್ಚರಿಕೆಯ ಕ್ರಮವಾಗಿ ಐ.ಇ.ಸಿ ಕಾರ್ಯಚಟುವಟಿಕೆಗಳ ಮೂಲಕ ಸೋಂಕು ಹರಡದಂತೆ ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು. 
ಈ ಸಂದರ್ಭದಲ್ಲಿ ಸೋಂಕಿತರಿಗೆ ಜಿಲ್ಲಾಧಿಕಾರಿಗಳು ಪೌಷ್ಠಿಕ ಆಹಾರ ಹಾಗೂ ಔಷಧಿ ಕಿಟ್ ಗಳನ್ನು ವಿತರಿಸಿದರು. 
ಹೆಚ್.ಐ.ವಿ ಸೋಂಕಿನ ಲಕ್ಷಣಗಳು
ಆರಂಭದ ಹಂತದಲ್ಲಿ ಸೋಂಕಿತ ವ್ಯಕ್ತಿಗೆ ಯಾವುದೇ ಲಕ್ಷಣಗಳನ್ನು ಕಂಡು ಬರುವುದಿಲ್ಲ. ಆದರೆ ಹೆಚ್.ಐ.ವಿ ದೇಹದೊಳಗೆ ಬೆಳೆಯುತ್ತಿದ್ದಂತೆಯೇ ಆ ವ್ಯಕ್ತಿಯ ರೋಗ ನಿರೋಧಕ ಶಕ್ತಿ ದುರ್ಬಲಗೊಳ್ಳುತ್ತದೆ. ವ್ಯಕ್ತಿಯು ಗಣನೀಯ ಪ್ರಾಮಾಣದ ತೂಕ ಕಡಿಮೆಯಾಗುವುದು, ದೀರ್ಘಾವಧಿ ಜ್ವರ, ಬೇಧಿ, ಆಗಾಗ ನ್ಯುಮೋನಿಯಾ ಬರುವುದು ಮತ್ತು ಚರ್ಮದ ಸೋಂಕುಗಳು, ಮೆದುಳಿಗೆ ಸೋಂಕು, ಸೋಂಕಿತರಲ್ಲಿ ಸಮಾನ್ಯವಾಗಿರುವ ಟಿಬಿಯ ಸೂಚನೆಯಾಗಿ ಎರಡು ವಾರಕ್ಕಿಂತ ಹೆಚ್ಚಿನ ಅವಧಿಯ ಕೆಮ್ಮು ಕಂಡುಬರುತ್ತದೆ. 
ಹೆಚ್.ಐ.ವಿ ಸೋಂಕು ಹರಡುವ ಬಗೆ

 ಹೆಚ್.ಐ.ವಿ ಸೋಂಕಿತರ ರಕ್ತವನ್ನು ಪರೀಕ್ಷೆ ಮಾಡದೇ ಪಡೆಯುವುದು. ಸೋಂಕಿತರ ಚಿಕಿತ್ಸೆಗೆ ಬಳಸಿದ ವೈದ್ಯಕೀಯ ಸಲಕರಣೆಗಳನ್ನು ಸಂಸ್ಕರಿಸದೇ ಉಪಯೋಗಿಸುವುದು. ಹೆಚ್.ಐ.ವಿ ಸೋಂಕು ಹೊಂದಿರುವ ವ್ಯಕ್ತಿಯೊಂದಿಗೆ ಅಸುರಕ್ಷಿತ ಲೈಂಗಿಕ ಸಂಬಂಧ. ಸೋಂಕಿತ ತಾಯಿಯಿಂದ ಮಗುವಿಗೆ ಗರ್ಭಾವಸ್ಥೆಯಲ್ಲಿ, ಹೆರಿಗೆ ಸಮಯದಲ್ಲಿ ಅಥವಾ ಎದೆ ಹಾಲಿನ ಮೂಲಕ ಸೋಂಕು ಹರಡುತ್ತದೆ. ಏಡ್ಸ್ ತಡೆಗಟ್ಟಲು ಎ.ಆರ್.ಟಿ ಚಿಕಿತ್ಸೆಯನ್ನು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲಾಗುತ್ತದೆ. 
ಸಭೆಯಲ್ಲಿ ಚಿಕ್ಕಬಳ್ಳಾಪುರ ಸರ್ಕಾರಿ ವೈದ್ಯಕೀಯ ಕಾಲೇಜಿನ ಡೀನ್ ಮತ್ತು ನಿರ್ದೇಶಕರಾದ ಸಿದ್ಧೀಕ್ ಎಂ.ಅಹಮದ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿ ಯಲ್ಲಾ ರಮೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯಯೋಜನಾಧಿಕಾರಿ ಎಂ.ಧನುರೇಣುಕ  ಸೇರಿದಂತೆ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments