Friday, April 19, 2024
spot_img
HomeChikballapurಕೈವಾರದ ಡಾ.ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಬೋಧನಾ ತರಗತಿಗಳ ಸಮಾರೋಪ

ಕೈವಾರದ ಡಾ.ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಬೋಧನಾ ತರಗತಿಗಳ ಸಮಾರೋಪ

ಪಾಲಾರ್ ಪತ್ರಿಕೆ | Palar Pathrike

ಚಿಂತಾಮಣಿ: ತಾಲೂಕಿನ ಕೈವಾರ ಗ್ರಾಮದ ಡಾ. ಬಿ ಆರ್. ಅಂಬೇಡ್ಕರ್ ಪ್ರೌಢಶಾಲೆಯಲ್ಲಿ ಉಚಿತ ಬೋಧನಾ ತರಗತಿಗಳ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿತ್ತು.
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಈ ಶಾಲೆಯಲ್ಲಿ ಕಲಿಕೆಯಲ್ಲಿ ಹಿಂದುಳಿರುವ ಹತ್ತನೇ ತರಗತಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸುಮಾರು ಮೂರು ತಿಂಗಳ ಕಾಲ ಉಚಿತ ಬೋಧನಾ ತರಗತಿಗಳನ್ನು ನಡೆಸಲಾಯಿತು.
ಜ್ಞಾನವಿಕಾಸ ಯೋಜನೆಯ ತಾಲೂಕು ಸಮನ್ವಯಾ ಧಿಕಾರಿಗಳಾದ ಅನಿತಾ ಮಾತನಾಡಿ ಬೋಧನಾ ತರಗತಿಗಳ ಉದ್ದೇಶ ಮತ್ತು ಪ್ರಾಮುಖ್ಯತೆಯ ಬಗ್ಗೆ ವಿವರಿಸಿದರು.
ಮುಖ್ಯ ಶಿಕ್ಷಕರುಗಳಾದ ಕೆ. ಸುರೇಶ್, ಹರೀಶ್ ಬಾಬು ಮಾತನಾಡಿ ಬೋಧನಾ ತರಗತಿಗಳಿಂದ ವಿದ್ಯಾರ್ಥಿಗಳಿಗೆ ಬಹಳಷ್ಟು ಪ್ರಯೋಜನವಾಗಿದೆ ಎಂದು ತಿಳಿಸಿದರು. ಹಲವು ಮಂದಿ ವಿದ್ಯಾರ್ಥಿಗಳು ಮಾತನಾಡಿ ತಮ್ಮ ಅನಿಸಿಕೆ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಶಾಲೆಯ ಸಂಸ್ಥಾಪಕ ಅಧ್ಯಕ್ಷೆ ಎಸ್ ಎಂ. ರೋಜಾ, ಶಾಲೆಯ ಸಹಶಿಕ್ಷಕರಾದ ಶ್ರೀಧರ್ ಹಿರೇಮಠ, ಸಿ. ಉಮೇಶ್, ಯೋಗಮ್ಮ ಮಲ್ಲಾಪುರ ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಶಾರದಾ ಪೂಜೆಯನ್ನು ಸಹ ಹಮ್ಮಿಕೊಳ್ಳಲಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments