Thursday, April 25, 2024
spot_img
HomeBangalore Ruralಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನಿಳಿಸಿ ಕೇಸರಿ ಧ್ವಜವನ್ನೇರಿಸುವ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ಸಿಗರ ಕಿಡಿ

ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನಿಳಿಸಿ ಕೇಸರಿ ಧ್ವಜವನ್ನೇರಿಸುವ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಕಾಂಗ್ರೆಸ್ಸಿಗರ ಕಿಡಿ

ದೇವನಹಳ್ಳಿ: ರಾಜ್ಯ ಸÀರ್ಕಾರದಲ್ಲಿ ಸಚಿವ ಸ್ಥಾನದಲ್ಲಿರುವ ಕೆ.ಎಸ್.ಈಶ್ವರಪ್ಪನವರು ಇತ್ತೀಚೆಗೆ ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆಯನ್ನು ಕೊಟ್ಟಿರುತ್ತಾರೆ. ಇದು ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ಕೂಡಲೇ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿAದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ರಾಷ್ಟç ಧ್ವಜವನ್ನಿಡಿದು ಪ್ರತಿಭಟನೆ ನಡೆಸಿದರು.

ಪಟ್ಟಣದ ತಾಲೂಕು ಆಡಳಿತ ಮುಂಭಾಗದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು ತಾಲೂಕು ಆಡಳಿತ ಕಚೇರಿ ಮುಂಭಾಗದಲ್ಲಿ ಕೆ.ಎಸ್.ಈಶ್ವರಪ್ಪ ಅವರಿಗೆ ದಿಕ್ಕಾರ ಕೂಗಿದರು.

ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಪ್ರಸನ್ನಕುಮಾರ್ ಮಾತನಾಡಿ, ರಾಜ್ಯದ ಕ್ಯಾಬಿನೆಟ್ ಸಚಿವರಾದ ಈಶ್ವರಪ್ಪ ಅವರ ಮಾತುಗಳನ್ನು ರಾಜ್ಯದ ಜನರು ಸೂಕ್ಷö್ಮವಾಗಿ ಗಮನಿಸುತ್ತಿದ್ದಾರೆ. ಯಾವುದೇ ಒಂದು ಸ್ಟೇಟ್‌ಮೆಂಟ್ ಮಾಡಬೇಕಾದ್ರೂ ಅರ್ಥವಿಲ್ಲದ ಸ್ಟೇಟ್ಮೆಂಟ್ ಮಾಡ್ತಿದ್ದಾರೆ. ಇಡೀ ದೇಶವೇ ತಲೆತಗ್ಗಿಸುವ ಮಾತನ್ನು ಆಡಿದ್ದಾರೆ. ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸ್ತೀವಿ ಎಂದು ಹೇಳಿದ್ದಾರೆ. ಹಿಂದೂರಾಷ್ಟç ಮಾಡ್ತೀವಿ, ಇನ್ನೊಂದು ಮಾಡ್ತಿವಿ ಎಂದು ಹೇಳ್ತಿದ್ದಾರೆ. ಆದ್ರೆ, ಜನರಿಗೆ ಇಷ್ಟೂ ಸಮಸ್ಯೆ ಇರುವಾಗ ಅದರ ಬಗ್ಗೆ ಯೋಚಿಸದೆ, ಈ ಭ್ರಷ್ಟ ಈಶ್ವರಪ್ಪ ಹೇಳಿಕೆ ಕೊಟ್ಟಿರುವುದರಿಂದ ತಕ್ಷಣವೇ ಬಿಜೆಪಿ ಸರಕಾರ ಸಂಪುಟದಿAದ ವಜಾಗೊಳಿಸಬೇಕು ಮತ್ತು ಅವರ ಮೇಲೆ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಕಿಡಿಕಾರಿದರು.

ಮಾಜಿ ಶಾಸಕ ಮುನಿನರಸಿಂಹಯ್ಯ ಮಾತನಾಡಿ, ಬಿಜೆಪಿ ಸರ್ಕಾರದಲ್ಲಿ ಈಶ್ವರಪ್ಪ ಮಂತ್ರಿಯಾಗಿ ವಿವಾದಿತ ಹೇಳಿಕೆಗಳನ್ನು ನೀಡಿ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿAದ ವಜಾಗೊಳಿಸಬೇಕು. ಅವರ ವಿರುದ್ದ ದೇಶದ್ರೋಹಿ ಪ್ರಕರಣ ದಾಖಲಿಸಿ ಬಂದಿಸಬೇಕು. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಪರಿಜ್ಞಾನ ಇಟ್ಟುಕೊಂಡು ಮಾತನಾಡಬೇಕು. ನಾಲಿಗೆ ಇದೆ ಎಂದು ಮಾತನಾಡಿದರೆ ಎಷ್ಟರ ಮಟ್ಟಿಗೆ ಸರಿ ಎನಿಸುತ್ತದೆ. ಎಂದು ಕಿಡಿಕಾರಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್ ಮಾತನಾಡಿ, ಬಿಜೆಪಿ ಸÀರ್ಕಾರದ ಒಬ್ಬ ಅವಿದ್ಯಾವಂತ ಕ್ಯಾಬಿನೆಟ್ ಮಂತ್ರಿಯಾದAಹತ ಈಶ್ವರಪ್ಪನವರು ನಮ್ಮ ರಾಷ್ಟçಧ್ವಜವನ್ನು ಇಳಿಸಿ, ಕೇಸರಿ ಧ್ವಜವನ್ನು ಹಾರಿಸುತ್ತೇನೆ ಎಂದು ಹೇಳಿಕೆಕೊಟ್ಟಂತಹ ಮಂತ್ರಿಯನ್ನು ಇಡೀ ರಾಜ್ಯಾದಾದ್ಯಂತ ಕಾಂಗ್ರೆಸ್ ಪಕ್ಷದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ತಹಶೀಲ್ದಾರ್ ಮುಕೇನ ರಾಜ್ಯಪಾಲರಿಗೆ ಮನವಿ ಕೊಡಲು ಮನವಿ ಸಲ್ಲಿಸಲಾಗುತ್ತಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿÀಹಶೀಲ್ದಾರ್ ಶಿವರಾಜ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ವೇಳೆಯಲ್ಲಿ ಡಿಕೆ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ.ಎಸ್.ಅAಗಡಿ, ವೆಂಕಟಸ್ವಾಮಿ, ಕೆಪಿಸಿಸಿ ಹಿಂದುಳಿದ ವರ್ಗದ ಉಪಾಧ್ಯಕ್ಷ ಸಿ.ಜಗನ್ನಾಥ್, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಆರ್.ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಶಾಂತಕುಮಾರ್, ಜಿಲ್ಲಾ ಎಸ್‌ಸಿಘಟಕದ ಅಧ್ಯಕ್ಷ ಚೌಡಪ್ಪನಹಳ್ಳಿ ಲೋಕೇಶ್,ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಆರ್.ನಾಗೇಶ್, ಪ್ರಧಾನ ಕಾರ್ಯದರ್ಶಿ ಆರ್.ಸುಮಂತ್, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಚಂದ್ರಪ್ಪ, ತೂಬಗೆರೆ ಬ್ಲಾಕ್ ಕಾಂಗ್ರೆಸ್ ಅಧಕ್ಷ ಕೆಪಿಸಿಸಿ ಚೇತನ್‌ಗೌಡ, ಪಟಾಲಪ್ಪ, ಚಿನ್ನಪ್ಪ, ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಅಧ್ಯಕ್ಷ ಪುರುಶೋತ್ತಮ್‌ಕುಮಾರ್, ಯುವ ಕಾಂಗ್ರೆಸ್‌ನ ಸಂದೀಪ್, ಕರ್ನಾಟಕ ಮಾದಿಗ ದಂಡೋರ ಪ್ರಚಾರ ಸಮಿತಿ ಅಧ್ಯಕ್ಷ ಬುಳ್ಳಹಳ್ಳಿ ರಾಜಪ್ಪ, ಖಾದಿಬೋರ್ಡ್ ಅಧ್ಯಕ್ಷ ನಾಗೇಗೌಡ, ಕುಂದಾಣ ಹೋಬಳಿ ಅಧ್ಯಕ್ಷ ಕೋದಂಡರಾಮು, ದೇವನಹಳ್ಳಿ ತಾಲೂಕು ಕಾಂಗ್ರೆಸ್ ಮುಖಂಡರು, ಮಹಿಳಾ ಮುಖಂಡರು, ಕಾರ್ಯಕರ್ತರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments