Sunday, May 5, 2024
spot_img
HomeBangalore Ruralರಾಜ್ಯ ಬಿಜೆಪಿ ಸರ್ಕಾರ ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಉತ್ತೇಜನ ಕಾರ್ಯಕ್ರಮಗಳಿಗೆ ಚಾಲನೆ

ರಾಜ್ಯ ಬಿಜೆಪಿ ಸರ್ಕಾರ ಸಾವಯವ ಕೃಷಿ ಮತ್ತು ಸಿರಿಧಾನ್ಯಗಳ ಉತ್ತೇಜನ ಕಾರ್ಯಕ್ರಮಗಳಿಗೆ ಚಾಲನೆ

ಪಾಲಾರ್ ಪತ್ರಿಕೆ | Palar Pathrike

ದೇವನಹಳ್ಳಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ಪ್ರತಿವರ್ಷಕ್ಕೆ 6ಸಾವಿರ ಸಹಾಯಧನ ನೀಡುತ್ತದೆ. ಇದರ ಜೊತೆಗೆ ರಾಜ್ಯದ ಬಿಜೆಪಿ ಸರ್ಕಾರವು ಪ್ರತಿವರ್ಷಕ್ಕೆ ಹೆಚ್ಚುವರಿಯಾಗಿ 4ಸಾವಿರ ರೂ.ಗಳನ್ನು ರೈತರಿಗೆ ನೀಡುತ್ತಿದೆ. ರಾಜ್ಯದ ಸುಮಾರು 50.36ಲಕ್ಷಕ್ಕೂ ಹೆಚ್ಚು ರೈತರು ಇದರ ಪ್ರಯೋಜನೆ ಪಡೆಯುತ್ತಿದ್ದಾರೆ. ಇಡೀ ರಾಷ್ಟçದಲ್ಲಿಯೇ ರೈತರ ಖಾತೆಗಳಿಗೆ ಹಣ ಹಾಕಿರಲಿಲ್ಲ. ಎಂದು ಜಿಲ್ಲಾ ಬಿಜೆಪಿ ರೈತಮೋರ್ಚ ಅಧ್ಯಕ್ಷ ಹೆಚ್.ಎಂ.ರವಿಕುಮಾರ್ ತಿಳಿಸಿದರು.
ತಾಲೂಕಿನ ಕೊಯಿರ ಹೊಸೂರು ಗ್ರಾಮದಲ್ಲಿ ಅವರ ನಿವಾಸದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ರೈತರಿಗೆ ಹಲವಾರು ಯೋಜನೆಗಳನ್ನು ರೂಪಿಸಿದೆ. ಪ್ರತಿ ಮನೆಮನೆಗೆ ತೆರಳಿ ರೈತರಿಗೆ ಮನದಟ್ಟು ಮಾಡಬೇಕು. ಪೂರ್ಣಪ್ರಮಾಣದಲ್ಲಿ ಬಿಜೆಪಿ ಸರ್ಕಾರವನ್ನು ಮತ್ತೆ ಅಧಿಕಾರಕ್ಕೆ ತರಬೇಕು. ಕಿಸಾನ್ ಸಮ್ಮಾನ್ ಯೋಜನೆಯಡಿ ಕೇಂದ್ರಸರ್ಕಾರ ಈಗಾಗಲೇ 10ಸಾವಿರ ಕೋಟಿ ರೂ.ಗಳನ್ನು ರೈತರ ಖಾತೆಗಳಿಗೆ ವರ್ಗಾಯಿಸಿದೆ. ಯಡಿಯೂರಪ್ಪ ಹಾಗೂ ಬಸವರಾಜ್ ಬೊಮ್ಮಾಯಿ ಅವರ ಸರ್ಕಾರಗಳು 4.800ಕೋಟಿಗೂ ಹೆಚ್ಚು ವರ್ಗಾಯಿಸಿದೆ. ಯಾವುದೇ ಸರ್ಕಾರ ರೈತರಿಗೆ ಇಷ್ಟು ಯೋಜನೆಗಳನ್ನು ಮಾಡಿರಲಿಲ್ಲ. ರೈತರ ಆದಾಯ ದ್ವಿಗುಣಗೊಳಿಸಲು ಸಾಕಷ್ಟು ಯೋಜನೆಗಳನ್ನು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ 22 ನೇ ಸಾಲಿನಲ್ಲಿ ಹೊಸ ಸಕ್ಕರೆ ಕಾರ್ಖಾನೆ ಹಾಗೂ ಎಥನಾಲ್ ಘಟಕ ಸ್ಥಾಪನೆಗಾಗಿ ಅಂತರ ಪ್ರಮಾಣಪತ್ರ ಕೋರಿ 42 ಹೊಸ ಅರ್ಜಿಗಳು ಉದ್ಯಮಿಗಳಿಂದ ಸ್ವೀಕೃತವಾಗಿವೆ ಇದರಿಂದಾಗಿ ರಾಜ್ಯದ ರೈತರಿಗೆ ರೂ . 204.47 ಕೋಟಿ ಹೆಚ್ಚುವರಿಯಾಗಿ ಕಬ್ಬಿನ ಬಿಲ್ಲು ಸಿಗಲಿದೆ . ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಸಚಿವ ಸಂಪುಟಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇವೆ.ಎಂದು ಹೇಳಿದರು.
ಕರ್ನಾಟಕವು ರಾಷ್ಟçದ ಮೂರನೇ ಅತಿ ದೊಡ್ಡ ಸಕ್ಕರೆ ಉತ್ಪಾದಿಸುವ ರಾಜ್ವಾಗಿದೆ . ಮೊದಲನೇ ಸ್ಥಾನದಲ್ಲಿ ಉತ್ತರ ಪ್ರದೇಶ ಮತ್ತು ಎರಡನೇ ಸ್ಥಾನದಲ್ಲಿ ಮಹಾರಾಷ್ಟç ರಾಜ್ಯಗಳಿವೆ ರಾಜ್ಯದಲ್ಲಿ ಒಟ್ಟು 89 ನೋಂದಾಯಿತ ಸಕ್ಕರೆ ಕಾರ್ಖಾನೆಗಳಿದ್ದು 72 ಕಾರ್ಖಾನೆಗಳು ಕಾರ್ಯನಿರತವಾಗಿವೆ . ಇದರ ಪೈಕಿ 14 ಸಹಕಾರಿ ವಲಯದಲ್ಲಿವೆ . ಸಹಕಾರಿ ವಲಯ ( ಗುತ್ತಿಗೆ ) -8 , ಖಾಸಗಿ ವಲಯದಲ್ಲಿ 50 ಕಾರ್ಖಾನೆಗಳಿವೆ . ಇವುಗಳು 2021-22ರಲ್ಲಿ 622,26 ಲಕ್ಷ ಮೆಟ್ರಿಕ್ ಟನ್ ಕಬ್ಬನ್ನು ಅರೆದು 59.78 ಮೆ.ಟನ್ ಸಕ್ಕರೆ ಉತ್ಪಾದಿಸಿವೆ ಅ 2022 ರ ಅಂತ್ಯಕ್ಕೆ ಸಕ್ಕರೆ ಕಾರ್ಖಾನೆಗಳು 2021-22ನೇ ಹಂಗಾಮಿನಲ್ಲಿ ನುರಿಸಿದ ಕಬ್ಬಿಗೆ ರೂ19,634.84 ಕೋಟಿ ಪಾವತಿಸಬೇಕಿದ್ದು , 19,922.30 ಕೋಟಿ ಪಾವತಿಸಿದ್ದು , ಯಾವುದೇ ಬಾಕಿ ಇರುವುದಿಲ್ಲ . ಪಾವತಿ ಪ್ರಮಾಣವು ಶೇ 100 ರಷ್ಟಿದೆ . ಕೆಲವು ಸಕ್ಕರೆ ಕಾರ್ಖಾನೆಗಳು ಕೇಂದ್ರ ಸರಕಾರ ನಿಗದಿಪಡಿಸಿದ ಎಫ್‌ಆರ್‌ಪಿ ದರಕ್ಕಿಂತ ಹೆಚ್ಚು ಕಬ್ಬಿನ ದರ ಪಾವತಿಸಿವೆ . – 2022-23ನೇ ಸಾಲಿನಲ್ಲಿ ಒಟ್ಟು 78 ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಕಾರ್ಯ ಪ್ರಾರಂಭಿಸುವ ಅಂದಾಜಿದೆ , ಈ ಪೈಕಿ 68 ಕಾರ್ಖಾನೆಗಳು : ಕಬ್ಬು ಅರೆಯುವ ಕಾರ್ಯ ಪ್ರಾರಂಭಿಸಿವೆ . ನ 2022ರಲ್ಲಿದ್ದಂತೆ ಈ ಕಾರ್ಖಾನೆಗಳು 119,46 ಲಕ್ಷ ಮೆ.ಟನ್ , ಕಬ್ಬು ನುರಿಸಿ 38.77 ಲಕ್ಷ ಕ್ವಿಂಟಲ್ ಸಕ್ಕರೆ ಉತ್ಪಾದಿಸಿವೆ ಸಕ್ಕರೆ ನಿರ್ದೇಶನಾಲಯವು ಬೆಳಗಾವಿಯ ಎಸï.ನಿಜಲಿಂಗಪ್ಪ ಸಕ್ಕರೆ ಸಂಸ್ಥೆ ಹಾಗೂ ಮಂಡ್ಯದ ಭಾರತರತ್ನ ಕಬ್ಬು ಸಂಶೋಧನಾ ಸಂಸ್ಥೆಗೆ ಕಬ್ಬಿನ ಸಂಶೋಧನೆ ಮತ್ತು ಅಭಿವೃದ್ಧಿಗೆ ಮತ್ತು ತರಬೇತಿ ಸಂಬAಧ ವಾರ್ಷಿಕ ಅನುದಾನವಾಗಿ 22-23ನೇ ಆರ್ಥಿಕ ವರ್ಷಕ್ಕೆ ರೂ . 75 ಲಕ್ಷ ಅನುದಾನ ನೀಡಿದೆ ರಾಜ್ಯದಲ್ಲಿ ಕೆಲವು ಸಹಕಾರಿ ಸಕ್ಕರೆ ಕಾರ್ಖಾನೆಗಳು ದುಡಿಯುವ ಬಂಡವಾಳದ ಕೊರತೆ ಮತ್ತು ಹಣಕಾಸಿನ ದುಸ್ಥಿತಿಯಿಂದ ಸ್ಥಗಿತವಾಗಿದ್ದವು . ಸರಕಾರವು ಈ 9 ಸಕ್ಕರೆ ಕಾರ್ಖಾನೆಗಳನ್ನು ಕಬ್ಬು ಬೆಳೆಗಾರ ರೈತರು ಮತ್ತು ಕಾರ್ಮಿಕರ ಹಿತದೃಷ್ಟಿಯಿಂದ ಪುನಶ್ವೇತನಗೊಳಿಸಲು ಗುತ್ತಿಗೆ ಆಧಾರದ ಮೇಲೆ ಖಾಸಗಿ ಉದ್ಯಮಿಗಳಿಗೆ ಕೊಟ್ಟಿದೆ ಮಂಡ್ಯದ ರಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಂಪನಿಯನ್ನು ಸಾರ್ವಜ ವಲಯದಲ್ಲಿ ಮುಂದುವರಿಸಿ ಪುನಶ್ವೇತನಗೊಳಿಸಲು ಸರಕಾರ ನಿರ್ಧರಿಸಿದೆ 22-23ರಲ್ಲಿ ರೂ . 50 ಕೋಟಿಯನ್ನು ಬಜೆಟ್ನಲ್ಲಿ ಮೀಸಲಿಟ್ಟಿದೆ . ಇಲ್ಲಿನವರೆಗೆ 45 ಕೋಟಿ ಬಿಡುಗಡೆ ಮಾಡಲಾಗಿದೆ . ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments