Friday, April 19, 2024
spot_img
HomeChikballapurಆರೋಗ್ಯ ಇಲಾಖೆಯ ಯೋಜನೆಗಳ ಅರಿವು ಕುರಿತ ಕಾರ್ಯಾಗಾರಕ್ಕೆ ಸಿಇಓ ಕೆ.ರೇವಣಪ್ಪ ಚಾಲನೆ

ಆರೋಗ್ಯ ಇಲಾಖೆಯ ಯೋಜನೆಗಳ ಅರಿವು ಕುರಿತ ಕಾರ್ಯಾಗಾರಕ್ಕೆ ಸಿಇಓ ಕೆ.ರೇವಣಪ್ಪ ಚಾಲನೆ

ಪಾಲಾರ್ ಪತ್ರಿಕೆ | Palar Pathrike

ದೇವನಹಳ್ಳಿ: ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾದ ೨೦೨೨-೨೩ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿಯಲ್ಲಿ ಆರೋಗ್ಯ ಸೇವೆಗಳನ್ನು ಸಮುದಾಯಕ್ಕೆ ಸಮರ್ಪಕವಾಗಿ ತಲುಪಿಸಲು ಗ್ರಾಮ ಪಂಚಾಯತಿಗಳ ಸಹಕಾರ, ಸಮನ್ವಯತೆಗಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳ ಅಧ್ಯಕ್ಷರುಗಳಿಗೆ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಏರ್ಪಡಿಸಲಾದ ಆರೋಗ್ಯ ಇಲಾಖೆಯ ಯೋಜನೆ/ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡುವ ಒಂದು ದಿನದ ಕಾರ್ಯಗಾರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ರೇವಣಪ್ಪ ಅವರು ಆರೋಗ್ಯ ಇಲಾಖೆಯ ಯೋಜನೆ/ ಕಾರ್ಯಕ್ರಮಗಳ ಕುರಿತ ಕಿರು ಪುಸ್ತಕ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ವೇಳೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಾ.ನಾಗರಾಜ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವಿಜೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನರೇಗಾ ತಾಂತ್ರಿಕ ಅಭಿಯಂತರರು ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments