Thursday, April 25, 2024
spot_img
HomeBangalore Ruralವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾಕಾರ್ಯಕರ್ತರಿಂದ ಶಾಸಕರಿಗೆ ಮನವಿ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾಕಾರ್ಯಕರ್ತರಿಂದ ಶಾಸಕರಿಗೆ ಮನವಿ

ಪಾಲಾರ್ ಪಾತ್ರಿಕೆ | Palar Pathrike

ದೇವನಹಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ವತಿಯಿಂದ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಅವರಿಗೆ ಸಾಮೂಹಿಕವಾಗಿ ಮನವಿ ಪತ್ರ ಸಲ್ಲಿಸಿದರು.
ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶಾಸಕ ಎಲ್.ಎನ್.ನಾರಾಯಣಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು. ರಾಜ್ಯದ ಮೂಲೆ ಮೂಲೆಯಲ್ಲೂ ಆಶಾ ಕಾರ್ಯಕರ್ತರು ಕೋವಿಡ್-19 ಯೋಧರಾಗಿ ಸಲ್ಲಿಸಿರುವ ಸೇವೆಯನ್ನು ಜನಸಾಮಾನ್ಯರು ಮತ್ತು ಕೇಂದ್ರ ಮತ್ತು ರಾಜ್ಯ ಆರೋಗ್ಯ ಇಲಾಖೆ ಕೊಂಡಾಡುತ್ತಿರುವುದು ನಿಜಕ್ಕೂ ಹೆಮ್ಮೆಯ ವಿಷಯವಾಗಿದೆ. ಸೇವೆಗೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲೂö್ಯಎಚ್) ಸೇರಿದಂತೆ ಅಂತಾರಾಷ್ಟಿçÃಯ ಮಟ್ಟದಿಂದ ಹಿಡಿದು ಸರಕಾರದ ವಿವಿಧ ಸಂಘ ಸಂಸ್ಥೆಗಳು ನೀಡಿರುವ ಪ್ರಶಂಸೆ, ಬಿರುದು ನೂರಾರು ಸನ್ಮಾನಗಳಿಗೆ ಸಾಕ್ಷಿಯಾಗಿದೆ. ಆದರೆ, ಆಶಾ ಕಾರ್ಯಕರ್ತೆಯರಿಗೆ ಆರ್‌ಸಿಎಚ್ ಪೋರ್ಟಲ್ ಮೂಲಕ ಪ್ರೋತ್ಸಾಹದನ ನೀಡುವುದನ್ನು ರದ್ದುಗೊಳಿಸಿ, ರುಟೀನ್ ಕೆಲಸಗಳು ಮತ್ತು ನಿಗದಿತ ಚಟುವಟಿಕೆಗಳಿಗೆ ಕೇಂದ್ರ ಸರಕಾರ ನೀಡುತ್ತಿರುವ ಹಣವನ್ನು ಒಟ್ಟುಗೂಡಿಸಿ ಗೌರವಧನವನ್ನು ನಿಗಧಿಗೊಳಿಸಬೇಕು ಮತ್ತು ಇತರೆ ಬಹುದಿನಗಳ ಪ್ರಮುಖ ಬೇಡಿಕೆಗಳು ಶೀಘ್ರ ಈಡೇರಿಸಬೇಕು ಎಂದು ಅಹವಾಲು ಸಲ್ಲಿಸಿದರು.
ಶಾಸಕ ಎಲ್.ಎನ್.ನಾರಾಯಣಸ್ವಾಮಿ ಮಾತನಾಡಿ, ತಾವು ಸಲ್ಲಿಸಿರುವ ಮನವಿಯನ್ನು ಸರಕಾರದ ಗಮನಕ್ಕೆ ತಂದು ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತರಲಾಗುತ್ತದೆ. ಆದಷ್ಟು ಆಶಾಕಾರ್ಯಕರ್ತೆಯರ ಬೇಡಿಕೆಗಳು ಈಡೇರಿಸುವಂತೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ತಾಲೂಕು ಆಶಾಕಾರ್ಯಕರ್ತರ ಸಂಘದ ಅಧ್ಯಕ್ಷೆ ಅನಿತಾ, ಕಾರ್ಯಕರ್ತೆಯರಾದ ಮಂಜುಳಾ, ರಾಜ್ಯ ಕಾರ್ಯದರ್ಶಿ ನಾಗಲಕ್ಷಿö್ಮ, ಅಶ್ವತ್ಮö್ಮ, ಸುಜಾತ, ಪವಿತ್ರ, ಪದಾಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments