Friday, May 3, 2024
spot_img
HomeBangaloreನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ಅವರ ಆದರ್ಶ ಇಂದಿಗೂ ಅಜರಾಮರ : ಶಾಸಕ ಎಲ್.ಎನ್.ನಾರಾಯಣಸ್ವಾಮಿ

ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ಅವರ ಆದರ್ಶ ಇಂದಿಗೂ ಅಜರಾಮರ : ಶಾಸಕ ಎಲ್.ಎನ್.ನಾರಾಯಣಸ್ವಾಮಿ

ದೇವನಹಳ್ಳಿ: ವಚನ ಸಾಹಿತ್ಯಗಳ ರೂಪದಲ್ಲಿ ಶ್ರೀ ಅಂಬಿಗರ ಚೌಡಯ್ಯನವರು ಸಮಾಜಕ್ಕೆ ಹಲವು ಕೊಡುಗೆಗಳನ್ನು ನೀಡಿದ್ದಾರೆ ಇವರ ಆದರ್ಶಗಳು ಇಂದಿಗೂ ಅಜರಾಮರವಾಗಿದೆ ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ ಮಿನಿವಿಧಾನಸೌಧ ಆವರಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ನವರ ಜಯಂತಿಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಸಮಾನತೆಯ ಹರಿಕಾರ ನಿಜ ಶರಣ ಶ್ರೀ ಅಂಬಿಗರ ಚೌಡಯ್ಯ ನವರ ವಚನ ಸಾಹಿತ್ಯಗಳು ಇಂದಿನ ಯುವ ಪಿಳೀಗೆಗೆ ದಾರಿದೀಪವಾಗಿದೆ. ಇವರ ಜೀವನ ಚರಿತ್ರೆಯನ್ನು ಹೊಂದಿರುವ ಪುಸ್ತಕಗಳನ್ನು ಓದಿ ಅವರು ನಡೆದು ಬಂದ ದಾರಿಯನ್ನು ಬದುಕಿನಲ್ಲಿ ಮೈಗೂಡಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಸಮುದಾಯ ಭವನ ನಿರ್ಮಾಣದ ಜಾಗ ಮಂಜೂರಾತಿಗೆ ಶಿಫಾರಸ್ ಮಾಡಲಾಗುವುದು. ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತದೆ. ಕೋವಿಡ್ ಇರುವ ಕಾರಣ ಸರಳವಾಗಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಹ ಅದ್ದೂರಿಯಾಗಿ ಮಾಡುವಂತೆ ಮಾಡಲಾಗುತ್ತಿತ್ತು. ಆದರೆ, ಕೊರೊನಾದಿಂದಾಗಿ ಸರ್ಕಾರದ ಆದೇಶದಂತೆ ಸರಳವಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅಂಬಿಗರ ಚೌಡಯ್ಯ ಜಯಂತಿಯನ್ನು ಅದ್ದೂರಿಯಾಗಿ ಮಾಡಲಾಗುತ್ತದೆ ಅಂಬಿಗರ ಚೌಡಯ್ಯನವರು ಅಂದು ಅವರು ನೀಡಿರುವ ಮಾರ್ಗದರ್ಶನದಲ್ಲಿ ನಾವು ನಡೆಯಬೇಕು. .ಸಮಾಜದಲ್ಲಿದ್ದ ಮೂಢನಂಬಿಕೆಗಳು, ಕಂದಾಚಾರಗಳ ವಿರುದ್ಧ ತಮ್ಮ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರು. ಯುವ ಪೀಳಿಗೆ ವಿದ್ಯಾವಂತರಾಗಬೇಕು. ಮಹಾಪುರುಷರನ್ನು ಮಾದರಿಯನ್ನಾಗಿಸಿಕೊಂಡು ಉತ್ತಮ ಸಮಾಜಕ್ಕೆ ಕಂಕಣ ಬದ್ಧರಾಗಬೇಕು. ನಾವಿಕರಾಗಿ ಇಡೀ ಜಗತ್ತಿಗೆ ಹಲವು ಕೊಡುಗೆಗಳನ್ನು ನೀಡಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಪಾಲಿಸುವಂತಾಗಬೇಕು. ಎಂದು ಹೇಳಿದರು.

ಅಂಬಿಗರ ಚೌಡಯ್ಯ ಯುವಕ ಸಂಘದ ಅಧ್ಯಕ್ಷ ಸತೀಶ್ ಮಾತನಾಡಿ, ಸಮಾಜದ ಪ್ರತಿಯೊಬ್ಬರು ಅವರ ಇತಿಹಾಸ ಮತ್ತು ಅವರು ನಡೆದು ಬಂದ ದಾರಿಯನ್ನು ಪಾಲಿಸುವಂತೆ ಆಗಬೇಕು. ಸಮುದಾಯದ ಏಳಿಗೆಗೆ ಪ್ರತಿಯೊಬ್ಬರು ಶ್ರಮಿಸಬೇಕು. ಸಮುದಾಯದ ಏಳಿಗೆಗೆ ಅಂಬಿಗರ ಚೌಡಯ್ಯ ಅವರ ಕೊಡುಗೆ ಸಾಕಷ್ಟು ಇದೆ. ಕ್ಷೇತ್ರದ ಶಾಸಕರು ಸಮುದಾಯದ ಭವನ ನಿರ್ಮಿಸಿಕೊಳ್ಳಲು ಭೂಮಿ ಮಂಜೂರು ಮಾಡಿಸಬೇಕೆಂದು ಶಾಸಕರನ್ನು ಮನವಿ ಮಾಡಿದರು.

ಈ ವೇಳೆಯಲ್ಲಿ ತಹಶೀಲ್ದಾರ್ ಅನಿಲ್ ಕುಮಾರ್ ಅರೋಲಿಕರ್, ಗಂಗಾಪರಮೇಶ್ವರಿ ಅಭಿವೃದ್ದಿ ಟ್ರಸ್ಟ್ ಅಧ್ಯಕ್ಷ ಆರ್.ಗೋಪಾಲ್, ನಗರ ಘಟಕದ ಅಧ್ಯಕ್ಷ ಜಿ.ರಾಘವೇಂದ್ರ, ಕರ್ನಾಟಕ ರಾಜ್ಯ ಗಂಗಮತಸ್ಥರ ಸಂಘದ ಸಂಘಟನಾ ಕಾರ್ಯದರ್ಶಿ ಮುನಿರಾಜ್, ತಾಲೂಕು ಅಧ್ಯಕ್ಷ ರಾಮಾಂಜಿನಪ್ಪ, ಮುಖಂಡರಾದ ಆದಿನಾರಾಯಣ, ಸುರೇಶ್, ವೆಂಕಟೇಶ್, ಮುನಿಕೃಷ್ಣಪ್ಪ, ನಾರಾಯಣಸ್ವಾಮಿ, ಕೃಷ್ಣಪ್ಪ, ರಾಮಚಂದ್ರಪ್ಪ, ವೆಂಕಟೇಶಪ್ಪ, ಗೋಪಾಲಪ್ಪ, ರಾಮಣ್ಣ, ಮುನಿರಾಜು, ಮಂಜುರಾಜ್, ಮಂಜುನಾಥ್, ಅಂಬಿಗರ ಚೌಡಯ್ಯ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಹೆಚ್.ಜಿ.ಮಹೇಶ್, ಕಾರ್ಯಾಧ್ಯಕ್ಷ ಜಿ.ನಂದಕುಮಾರ್, ಖಜಾಂಚಿ ವೆಂಕಟೇಶ್, ನಿರ್ದೇಶಕರಾದ ವಸಂತ್, ರವಿಕುಮಾರ್, ಮನೋಜ್, ನಾಗೇಶ್, ದೇವರಾಜ್, ತಾಲೂಕು ಮಟ್ಟದ ಅಧಿಕಾರಿಗಳು, ಸಮುದಾಯದ ಮುಖಂಡರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments