Sunday, April 28, 2024
spot_img
HomeBangalore Ruralಸರಕಾರಿ ಜಾಗ ಉಳಿವಿಗೆ ಕರವೇ ಸ್ವಾಭಿಮಾನಿ ಸೇನೆ ಹೋರಾಟ

ಸರಕಾರಿ ಜಾಗ ಉಳಿವಿಗೆ ಕರವೇ ಸ್ವಾಭಿಮಾನಿ ಸೇನೆ ಹೋರಾಟ

ಪಾಲಾರ್ ಪತ್ರಿಕೆ | Palar Patirke .

ದೇವನಹಳ್ಳಿ: ದೇವನಹಳ್ಳಿ ತಾಲೂಕಿನ ಸರಕಾರಿ ಜಾಗ ಉಳಿವಿಗೆ ಕರವೇ ಸ್ವಾಭಿಮಾನಿ ಸೇನೆ ಹೋರಾಟ ಕರವೇ ಸ್ವಾಭಿಮಾನಿ ಸೇನೆಯಿಂದ ಜಿಲ್ಲಾಡಳಿತ ಮುಂದೆ ಪ್ರತಿಭಟನೆ ಎಚ್ಚರಿಕೆ.

ಸರ್ಕಾರಿ ಜಾಗಗಳನ್ನು ಉಳಿಸುವ ನಿಟ್ಟಿನಲ್ಲಿ ಸಂಘಟನೆ ನಿರಂತರವಾಗಿ ಹೋರಾಟ ಮಾಡುತ್ತಿದ್ದು, ರಾಮಸಂದ್ರ ಗ್ರಾಮದ ಸರ್ವೆ ನಂಬರ್‌ಗೆ ಸಂಬAಧಿಸಿದAಥೆ ಸರಕಾರಿ ಗೋಮಾಳದ ಜಾಗವನ್ನು ಅಧಿಕಾರಿಗಳು ತೆರವುಗೊಳಿಸುವಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಅನುರಾಧ ಅಶೋಕ್ ತಿಳಿಸಿದರು.
ದೇವನಹಳ್ಳಿ ಪಟ್ಟಣದ ಬಿಬಿ ರಸ್ತೆಯಲ್ಲಿರುವ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಕರವೇ ಸ್ವಾಭಿಮಾನಿ ಸೇನೆ ಸಂಘಟನೆ ವತಿಯಿಂದ ಆಯೋಜಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಒತ್ತುವರಿ ತೆರವುಗೊಳಿಸಲು 15 ದಿನಗಳ ಕಾಲವಕಾಶ ನೀಡಿದ್ದು, ಒತ್ತುವರಿ ತೆರವಿಗೆ ಕ್ರಮ ಕೈಗೊಂಡಿಲ್ಲವೆAದರೆ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ. ಈಗಾಗಲೇ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗಿದ್ದು, ತಹಶೀಲ್ದಾರ್ ಅವರ ಗಮನದಲ್ಲಿ ಒತ್ತುವರಿಯಾಗಿರುವುದು ವಿಚಾರ ಗೊತ್ತಿದ್ದರೂ ಸಹ ಸಂಬAಧಪಟ್ಟ ಭೂಮಾಲೀಕರಿಗೆ ಎವಿಕ್ಷನ್ ನೋಟೀಸ್ ಸಹ ನೀಡಿದ್ದು, ಮುಂದಿನ ಹಂತದಲ್ಲಿ ಜಿಲ್ಲಾಧಿಕಾರಿಗಳ ಗಮನಕ್ಕೂ ಸಹ ತರಲಾಗಿದೆ ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲವೆAದು ಆಕ್ರೋಶ ವ್ಯಕ್ತಪಡಿಸಿದರು.
ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಚಿಕ್ಕರಾಮನಹಳ್ಳಿ ಗ್ರಾಮದ ಸರ್ವೆ ನಂ.52, ಕುಂದಾಣ ಹೋಬಳಿ ದೊಡ್ಡಚೀಮನಹಳ್ಳಿ ಗ್ರಾಮದ ಸರ್ವೆ ನಂ.88, ಕಾಮೇನಹಳ್ಳಿ ಗ್ರಾಮದ ಸರ್ವೆ ನಂ.120, ಕಸಬಾ ಹೋಬಳಿಯ ತಿಮ್ಮೆಗೌಡನ ಹೊಸಹಳ್ಳಿ ಗ್ರಾಮದ ಸರ್ವೆ ನಂ.37, ಅಬ್ಬಚಿಕ್ಕನಹಳ್ಳಿ ಗ್ರಾಮದ ಸರ್ವೆ ನಂ.27, ರಾಯಸಂದ್ರ ಗ್ರಾಮದ ಸರ್ವೆ ನಂ. 35/1, 2, 3, 4ರ ಬಿ ಖರಾಬು, ಸೇರಿದಂತೆ ಪುರಸಭಾ ವ್ಯಾಪ್ತಿಯ ಸರ್ವೆ ನಂಬರ್‌ವೊAದರಲ್ಲಿ ಅಕ್ರಮವಾಗಿ ಭೂ ಒತ್ತುವರಿ ಮಾಡಿಕೊಂಡಿರುವುದನ್ನು ಅಧಿಕಾರಿಗಳು ತೆರವುಗೊಳಿಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ಜಿಲ್ಲಾ ಅಧ್ಯಕ್ಷೆ ಅನುರಾಧ ಅಶೋಕ್, ಜಿಲ್ಲಾ ಕಾರ್ಯದರ್ಶಿ ಮಮತಾ, ತಾಲೂಕು ಅಧ್ಯಕ್ಷೆ ಅನಿತಾ, ವೆಂಕಟೇಶ್, ಕುಮಾರ್, ಪದಾಧಿಕಾರಿಗಳು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments