Thursday, May 2, 2024
spot_img
HomeTumkurಪೌರ ಕಾರ್ಮಿಕರಿಗೆ ಶೀಘ್ರವಾಗಿ ವಸತಿ ಸೌಲಭ್ಯ ಕಲ್ಪಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ

ಪೌರ ಕಾರ್ಮಿಕರಿಗೆ ಶೀಘ್ರವಾಗಿ ವಸತಿ ಸೌಲಭ್ಯ ಕಲ್ಪಿಸಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ

-ಪಾಲಾರ್ ಪತ್ರಿಕೆ –
ತುಮಕೂರು: ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ವಸತಿ ರಹಿತ ಪೌರ ಕಾರ್ಮಿಕರಿಗೆ ಶೀಘ್ರ ವಸತಿ ಸೌಲಭ್ಯ ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿAದು ಜರುಗಿದ ಸಫಾಯಿ ಕರ್ಮಚಾರಿಗಳಿಗೆ ಸರ್ಕಾರದಿಂದ ದೊರೆಯಬಹುದಾದ ಸೌಲಭ್ಯಗಳು ಹಾಗೂ ಮ್ಯಾನ್ಯುಯಲ್ ಸ್ಕಾ÷್ಯವೆಂಜರುಗಳ ನಿಷೇಧ, ನಿಯೋಜನೆ ಮತ್ತು ಪುನರ್ವಸತಿ ಅಧಿನಿಯಮ ೨೦೧೩ರ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಮಟ್ಟದ ವಿಜಿಲೆನ್ಸ್ ಕಮಿಟಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸ್ಥಳ ಗುರುತಿಸಿ ತ್ವರಿತವಾಗಿ ನಿವೇಶನ ಹಂಚಿ ಮನೆ ನಿರ್ಮಾಣ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲೆಯ ಎಲ್ಲಾ ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪೌರಕಾರ್ಮಿಕರಿಗೆ ವಸತಿ ಹಂಚಿಕೆಗಾಗಿ ಈಗಾಗಲೇ ಗುರುತಿಸಿರುವ ಜಮೀನಿನನ್ನು ನಗರ ಯೋಜನಾ ಪ್ರಾಧಿಕಾರದಿಂದ ವಿನ್ಯಾಸಗೊಳಿಸಿ ನೀರು, ರಸ್ತೆ ಚರಂಡಿ, ವಿದ್ಯುತ್ ಪೂರೈಕೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪೌರಕಾರ್ಮಿಕರಿಗಾಗಿ ಈಗಾಗಲೇ ಗುರುತಿಸಿರುವ ಜಮೀನಿನಲ್ಲಿ ನಿವೇಶನ ರಹಿತವಾಗಿ ವಾಸವಿರುವ ಅಲೆಮಾರಿ, ಹಂದಿ ಜೋಗಿ, ದೊಂಬಿದಾಸ, ಮತ್ತು ಸುಡುಗಾಡು ಸಿದ್ಧ ಜನಾಂಗದವರ ಕುಟುಂಬಗಳಿಗೆ ವಿಶೇಷ ವಸತಿ ಯೋಜನೆಯಡಿ ನಿವೇಶನ ಮತ್ತು ವಸತಿ ಸೌಲಭ್ಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದರು.
ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ವಿತರಣೆ ಮತ್ತು ಅವುಗಳ ಉಪಯೋಗ ಕುರಿತಂತೆ ಅರಿವು ಮೂಸಡಿಸುವುದರ ಜೊತೆಗೆ ಸಕಾಲಕ್ಕೆ ಸುರಕ್ಷತಾ ಪರಿಕರಗಳಾದ ಕೈಗವಸು, ಮಾಸ್ಕ್, ಗಮ್ ಬೂಟ್, ಸೇಪ್ಟಿ ಷೂ, ಸಮವಸ್ತçಗಳನ್ನು ಸಕಾಲಕ್ಕೆ ವಿತರಿಸಬೇಕು ಎಂದರಲ್ಲದೆ, ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುವ ನೇರ ಪಾವತಿ ಪೌರ ಕಾರ್ಮಿಕರಿಗೆ ಪ್ರತಿ ಮಾಹೆಯ ವೇತನದಲ್ಲಿ ಕಟಾಯಿಸಲಾದ ಇ.ಎಸ್.ಐ. ಮತ್ತು ಪಿ.ಎಫ್. ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಪಾವತಿಸಬೇಕು ಎಂದು ಸೂಚಿಸಿದರು.
ಎಲ್ಲಾ ಪೌರಕಾರ್ಮಿಕರಿಗೆ ಶುಚಿ-ರುಚಿಯಾದ ಬೆಳಗಿನ ಉಪಹಾರ, ಮದ್ಯಾಹ್ನದ ಊಟ ನೀಡಬೇಕು. ಮೊದಲು ಸಂಬAಧಿಸಿದ ಅಧಿಕಾರಿಗಳು ಉಪಹಾರವನ್ನು ಸೇವಿಸಿದ ನಂತರ ಕಾರ್ಮಿಕರಿಗೆ ನೀಡುವ ಜೊತೆಗೆ ಕಾರ್ಮಿಕರು ಕಾರ್ಯ ನಿರ್ವಹಿಸುವ ಸ್ಥಳದಲ್ಲಿ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಪಾಲಿಕೆ, ಪಟ್ಟಣ ಪಂಚಾಯತಿ, ನಗರ/ಪುರ ಸಭೆಯ ಆವರಣದಲ್ಲಿ ವಿಶ್ರಾಂತಿ ಗೃಹ, ಸ್ನಾನ ಗೃಹ, ಕುಡಿಯುವ ನೀರು ಸೇರಿದಂತೆ ಶೌಚಾಲಯಗಳನ್ನು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಮಟ್ಟದ ವಿಜಿಲೆನ್ಸ್ ಸಮಿತಿ ಸದಸ್ಯ ಡಾ.ಬಿ.ಕೆ.ಓಬಳೇಶ ಮಾತನಾಡಿ ಸ್ವಯಂ ಘೋಷಣೆ ಮಾಡಿದ ಪೌರಕಾರ್ಮಿಕರ ಸರ್ವೇ ಕಾರ್ಯ ಪ್ರಗತಿಯಲ್ಲಿದೆ ಎಂದು ಸಭೆಗೆ ಮಾಹಿತಿ ನೀಡಿದರಲ್ಲದೆ, ಪೌರಕಾರ್ಮಿಕರ ಅವಲಂಬಿತ ಕುಟುಂಬಕ್ಕೆ ಸರ್ಕಾರದ ಯೋಜನೆಗಳ ಬಗ್ಗೆ ಅರಿವಿಲ್ಲ. ಅಧಿಕಾರಿಗಳು ಸರ್ಕಾರಿ ಯೋಜನೆಗಳ ಬಗ್ಗೆ ಪ್ರಚುರಪಡಿಸಿ ಪೌರಕಾರ್ಮಿಕರ ಅವಲಂಬಿತ ಕುಟುಂಬಗಳ ಆರ್ಥಿಕ ನೆರವನ್ನು ಒದಗಿಸಬೇಕು. ಅಕಾಲ ಮರಣಕ್ಕೆ ತುತ್ತಾದ ಪೌರಕಾರ್ಮಿಕರ ಕುಟುಂಬ ಸದಸ್ಯರಿಗೆ ಉದ್ಯೋಗ ನೀಡುವ ವ್ಯವಸ್ಥೆಯಾಗಬೇಕು. ಈ ಬಗ್ಗೆ ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು ಎಂದು ವಿನಂತಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ವಿಜಿಲೆನ್ಸ್ ಸಮಿತಿ ಸದಸ್ಯ ಕದರಪ್ಪ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಯಲ್ಲೂರ್ಕರ್ ಸೇರಿದಂತೆ ನಗರಸ್ಥಳೀಯ ಸಂಸ್ಥೆಗಳ ವಿವಿಧ ಅಧಿಕಾರಿಗಳು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments