Friday, May 3, 2024
spot_img
HomeRamnagarಕಾಲೇಜು ವಿದ್ಯಾರ್ಥಿಗಳ ಪ್ರವೇಶಾತಿ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ: ಪಿ.ಎಸ್.ವಸ್ತçದ್

ಕಾಲೇಜು ವಿದ್ಯಾರ್ಥಿಗಳ ಪ್ರವೇಶಾತಿ ಸಂದರ್ಭದಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ: ಪಿ.ಎಸ್.ವಸ್ತçದ್

ಪಾಲಾರ್ ಪತ್ರಿಕೆ

ರಾಮನಗರ: ಜಿಲ್ಲೆಯಲ್ಲಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಇಂಜಿನಿಯರಿAಗ್ ಕಾಲೇಜು ಹಾಗೂ ಡಿಪ್ಲೋಮಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ದಾಖಲಾಗುವ ಸಂದರ್ಭದಲ್ಲಿ ೧೮ ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯಲ್ಲಿ  ಹೆಸರು ನೊಂದಾಯಿಸಿಕೊಳ್ಳುವAತೆ ಜಾಗೃತಿ ಮೂಡಿಸಿ, ಸ್ಥಳದಲ್ಲೇ ನೊಂದಣಿಗೆ ಅವಕಾಶ ಕಲ್ಪಿಸಿ ಕೊಡಿ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ನಿವೃತ್ತ ಐ.ಎ.ಎಸ್. ಅಧಿಕಾರಿ ಪಿ.ಎಸ್. ವಸ್ತçದ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕಾಲೇಜು ವಿದ್ಯಾರ್ಥಿಗಳ ಹೆಸರನ್ನು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಾಗ ಆಫ್‌ಲೈನ್ ಮೂಲಕ ಭರ್ತಿ ಮಾಡಿದಾಗ ಆಯಾ ವಿಧಾನಸಭಾ ಕ್ಷೇತ್ರಕ್ಕೆ ಕಳುಹಿಸಿಕೊಡಬೇಕು. ಹೆಚ್ಚಿನ ಕೆಲಸವಾಗುತ್ತದೆ. ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದರ ಮೂಲಕ ಆನ್‌ಲೈನ್‌ನಲ್ಲಿ ಸುಲಭವಾಗಿ ನೊಂದಣಿ ಮಾಡಬಹುದು. ಜಿಲ್ಲೆಯ ಸರ್ಕಾರಿ ಇಂಜಿನಿಯರಿAಗ್ ಕಾಲೇಜಿನಲ್ಲಿ ೫೦೦ಕ್ಕೂ ಹೆಚ್ಚಿನ ವಿದ್ಯಾರ್ಥಿಗಳನ್ನು ಮತದಾರರ ಪಟ್ಟಿಯಲ್ಲಿ ಪ್ರವೇಶಾತಿ ಸಂದರ್ಭದಲ್ಲಿ ನೊಂದಣಿ ಮಾಡಿರುವುದು ಶ್ಲಾಘನೀಯ ಕೆಲಸ ಎಂದರು.
ಜಿಲ್ಲೆಯಲ್ಲಿ ೩೧೩ ಫ್ರೌಢ ಶಾಲೆಗಳಲ್ಲಿ ೭೮ ಪಿಯು/ ತತ್ಸಮಾನ ಕಾಲೇಜುಗಳು, ೨೩ ಪದವಿ/ ತತ್ಸಮಾನ ಕಾಲೇಜುಗಳಲ್ಲಿ ಒಟ್ಟು ೪೧೪ ಮತದಾರರ ಸಾಕ್ಷರತಾ ಸಂಘಗಳು ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಮೂಲಕ ಸಾರ್ವಜನಿಕರಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ಇರುವ ಬಗ್ಗೆ ಪರಿಶೀಲನೆ, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ, ಮತದಾನದ ಸಂದರ್ಭದಲ್ಲಿ ಪಾಲಿಸಬೇಕಾದ ಕ್ರಮಗಳು, ವಿಕಲಚೇತನರಿಗೆ ಮತಗಟ್ಟೆಯಲ್ಲಿ ಮತದಾನ ಮಾಡಲು ಮಾಡಿರುವ ವ್ಯವಸ್ಥೆಗಳು, ಮತದಾನದ ಸಂದರ್ಭದಲ್ಲಿ ಮತದಾರರ ಗುರುತಿನ ಚೀಟಿ ಇಲ್ಲದಿದ್ದಲ್ಲಿ ಮತದಾನ ಮಾಡಲು ಉಪಯೋಗಿಸಬಹುದಾದ ಪರ್ಯಾಯ ಗುರುತಿನ ಚೀಟಿಗಳು, ಕೋವಿಡ್ ಲಕ್ಷಣಗಳು ಇದ್ದಲ್ಲಿ ಮತದಾನದ ಸಂದರ್ಭದಲ್ಲಿ ಪಾಲಿಸಬೇಕಾದ ಮುನ್ನಚ್ಚರಿಕಾ ಕ್ರಮಗಳು, ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸುವಾಗ ಬೇಕಿರುವ ದಾಖಲೆಗಳು, ಮತದಾರರ  ಹೆಲ್ಪ್ ಲೈನ್ ಆÀ್ಯಪ್  ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಿ ಎಂದರು.
ವಿದ್ಯಾರ್ಥಿಗಳಿಗೆ ಪ್ರಬಂಧ, ರಸಪ್ರಶ್ನೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ. ಹೆಚ್ಚಿನ ಜನರಿಗೆ ಮತದಾನದ ಜಾಗೃತಿ ಮೂಡಿಸುವುದು ಆಗಿದ್ದು, ಸ್ಪರ್ಧೆಗೂ ಮೊದಲು ವಿದ್ಯಾರ್ಥಿಗಳಿಗೆ ಸ್ಪರ್ಧೆಯ ಬಗ್ಗೆ ಮಾಹಿತಿ ಸಿಗುವ ಮೂಲಗಳು ಹಾಗೂ ಸಂಪನ್ಮೂಲ ವ್ಯಕ್ತಿಗಳ ಬಗ್ಗೆ ತಿಳಿಸಿ ಇದರಿಂದ ವಿದ್ಯಾರ್ಥಿಗಳಲ್ಲಿ  ಮತದಾನದ ಶಿಕ್ಷಣ ಜ್ಞಾನ ಹೆಚ್ಚುತ್ತದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್, ಸಹಾಯಕ ನಿರ್ದೇಶಕ ಶಿವಪ್ಪ, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಸೋಮಲಿಂಗಯ್ಯ, ವಿವಿಧ ಕಾಲೇಜಿನ ಪ್ರಾಂಶುಪಾಲರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments