ಪಾಲಾರ್ ಪಾತ್ರಿಕೆ | Palar Pathrike ಗುಡಿಬಂಡೆ: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಮತ್ತು ಶ್ರೀ ಆಲೂರು ವೆಂಕಟರಾವ್ ಭಾಷಾ ಕೌಶಲ ತರಬೇತಿ ಕೇಂದ್ರ ಸಿ.ಟಿ.ಇ. ಚಿತ್ರದುರ್ಗ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ "ಕರ್ನಾಟಕ ಏಕೀಕರಣ ಹಾಗೂ ಕನ್ನಡ ಸಾಹಿತ್ಯ ಬೆಳವಣಿಗೆಗೆ ಕುಲಪುರೋಹಿತ ಶ್ರೀ ಆಲೂರು ವೆಂಕಟರಾಯರ ಕೊಡುಗೆ " ವಿಷಯದ ಕುರಿತು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ತಾಲೂಕಿನ ಬೀಚಗಾನಹಳ್ಳಿಕ್ರಾಸ್'ನ ಆದರ್ಶ ವಿದ್ಯಾಲಯದಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿರುವ ಸಂಗೀತ.ಬಿ.ಸಿ ಎಂಬ ವಿದ್ಯಾರ್ಥಿನಿ ಪ್ರಥಮ ಸ್ಥಾನ ಪಡೆದಿದ್ದಾರೆ ಹಾಗೂ ಇದೇ ಶಾಲೆಯ ಚಾರುಲತಾ.ಪಿ.ಆರ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ.