Wednesday, April 24, 2024
spot_img
HomeMandyaಡಿ.9 ಮತ್ತು 10 ರಂದು ಅಖಿಲ ಕರ್ನಾಟಕ ಜಾನಪದ ಸಮ್ಮೇಳನ: ಡಾ: ಹೆಚ್.ಎನ್ ಗೋಪಾಲ ಕೃಷ್ಣ

ಡಿ.9 ಮತ್ತು 10 ರಂದು ಅಖಿಲ ಕರ್ನಾಟಕ ಜಾನಪದ ಸಮ್ಮೇಳನ: ಡಾ: ಹೆಚ್.ಎನ್ ಗೋಪಾಲ ಕೃಷ್ಣ



ಪಾಲಾರ್ ಪತ್ರಿಕೆ | Palar Patrike

ಮಂಡ್ಯ:- ಜಿಲ್ಲಾಡಳಿತ ಹಾಗೂ ಕರ್ನಾಟಕ ಜಾನಪದ ಪರಿಷÀತ್ ವತಿಯಿಂದ ಡಿಸೆಂಬರ್ ೯ ಮತ್ತು ೧೦ ಅಂಬೇಡ್ಕರ್ ಭವನದಲ್ಲಿ ಅಖಿಲ ಕರ್ನಾಟಕ ಜಾನಪದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್.ಎನ್ ಗೋಪಾಲ ಕೃಷ್ಣ್ಣ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳ ಉತ್ತಮ ಜನಪದ ಕಲಾತಂಡಗಳು ಆಗಮಿಸಿ ಪ್ರದರ್ಶನ ನೀಡಲಿದೆ. ಇದಕ್ಕೆ ಬೇಕಿರುವ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಸ್ವಾಗತ ಸಮಿತಿಯನ್ನು ರಚಿಸಲಾಗಿದೆ ಎಂದರು.

ಸ್ವಾಗತ ಸಮಿತಿಯಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಮಹಾಸ್ವಾಮೀಜಿ ಅವರು ಮಹಾ ಪೋಷಕರಾಗಿ, ಜಿಲ್ಲಾ ಉಸ್ತುವಾರಿ ಸಚಿವರು, ರೇಷ್ಮೆ ಮತ್ತು ಯುವಸಬಲೀಕರಣ ಸಚಿವರು, ಸಂಸದರು, ಜಿಲ್ಲೆಯ ಎಲ್ಲಾ ವಿಧಾನಸಭಾ ಶಾಸಕರುಗಳು, ವಿಧಾನಪರಿಷತ್ ಶಾಸಕರುಗಳು ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಲಾಗುವುದು ಎಂದರು.

ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ನಡೆಸಲು ವಿವಿಧ ಇಲಾಖೆಗಳಿಂದ ಸಿಗುವಂತಹ ಸೌಲಭ್ಯಗಳು, ಸರ್ಕಾರೇತರ ಸಂಸ್ಥೆಗಳಿAದ ಸಿಗುವ ಸೌಲಭ್ಯಗಳು, ಸಂಪನ್ಮೂಲ ಕ್ರೂಡೀಕರಣ, ಖರ್ಚು ವೆಚ್ಚಗಳು, ವಿವಿಧ ಉಪಸಮಿತಿಗಳ ರಚನೆ, ರಿಜನಲ್ ಕಲ್ಚುರಲ್ ಸೆಂಟರ್‌ಗೆ ಬೇರೆ ರಾಜ್ಯಗಳಿಂದ ಕಲಾತಂಡಗಳ ಪ್ರದರ್ಶನ ನೀಡಲು ಮನವಿ ಕಳುಹಿಸಿಕೊಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಸಮ್ಮೇಳನದಲ್ಲಿ ಮಂಡ್ಯ ಜಿಲ್ಲೆ ಹೊರತುಪಡಿಸಿ ಬೇರೆ ಜಿಲ್ಲೆಗಳಿಂದ ೩೦೦ ರಿಂದ ೪೦೦ ಕಲಾವಿದರು ಭಾಗವಹಿಸಲಿದ್ದಾರೆ. ಇವರಿಗೆ ವಸತಿ ವ್ಯವಸ್ಥೆಯಾಗಬೇಕು. ಸಮ್ಮೇಳನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ೧೫೦೦ ರಿಂದ ೨೦೦೦ ಜನರು ಭಾಗವಹಿಸಲಿದ್ದಾರೆ. ಅವರಿಗೆ ಊಟ, ಉಪಹಾರದ ವ್ಯವಸ್ಥೆಯಾಗಬೇಕಿದೆ ಎಂದರು.

ಎರಡು ದಿನಗಳ ನಡೆಯುವ ಕಾರ್ಯಕ್ರಮದಲ್ಲಿ ಮೆರವಣಿಗೆ, ಉದ್ಘಾಟನೆ, ವಿವಿಧ ಗಾಯನ ಮತ್ತು ನೃತ್ಯಗಳ ಬಗ್ಗೆ ವ್ಯವಸ್ಥಿತವಾಗಿ ವೇಳಪಟ್ಟಿಯಾಗಬೇಕು. ರಾಮನಗರದ ಜಾನಪದ ಲೋಕದ ಸಂಗ್ರಾಹಣಾಲಯದಲ್ಲಿರುವ ವಿವಿಧ ಗ್ರಾಮೀಣ ಬಳಕೆಯ ವಸ್ತುಗಳನ್ನು ಸಮ್ಮೇಳನ ನಡೆಯುವ ೨ ದಿನಗಳ ಕಾಲ ಮಂಡ್ಯ ಜಿಲ್ಲೆಯಲ್ಲಿ ಪ್ರದರ್ಶನಕ್ಕೆ ಇಡಲು ಚಿಂತಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಕರ್ನಾಟಕ ಜಾನಪದ ಪರಿಷÀತ್ತ ಅಧ್ಯಕ್ಷ ಡಿ.ಪಿ ಸ್ವಾಮಿ, ಸ್ವಾಗತ ಸಮಿತಿಯ ಸಂಘಟನಾ ಕಾರ್ಯದರ್ಶಿ ಕೆ.ಎಂ.ಕೃಷ್ಣೇಗೌಡ ಕೀಲಾರ, ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ನಾಗರಾಜು, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಂಜೀವಪ್ಪ, ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಟಿ.ಜವರೇಗೌಡ, ನಗರಸಭೆ ಆಯುಕ್ತರಾದ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಎನ್.ಧನಂಜಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಾಗರಾಜು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಬಿ.ರಂಗೇಗೌಡ, ಜಿಲ್ಲಾ ಹಿಂದುಳಿದ ವರ್ಗಗಳ ಇಲಾಖೆಯ ಅಧಿಕಾರಿ ಶ್ರೀನಿವಾಸ್ , ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ, ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments