Tuesday, April 16, 2024
spot_img
HomeMandyaಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಶಾಸಕ ಡಾ: ಕೆ...

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಶಾಸಕ ಡಾ: ಕೆ ಅನ್ನದಾನಿ


ಪಾಲಾರ್ ಪತ್ರಿಕೆ | Palar Patrike
ಮಂಡ್ಯ:- ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸರ್ಕಾರÀ ಜಾರಿಗೆ ತಂದಿರುವುದು ಉತ್ತಮ ಕೆಲಸವಾಗಿದ್ದು, ಮಳವಳ್ಳಿ ತಾಲ್ಲೂಕಿನಲ್ಲಿ ಈ ವರೆಗೂ ನಡೆದ ೧೦ ಕಾರ್ಯಕ್ರಮಗಳಲ್ಲೂ ತಪ್ಪದೇ ಭಾಗವಹಿಸಿದ್ದೇನೆ. ಸವಲತ್ತುಗಳನ್ನು ಜನರ ಬಳಿಗೆ ಬಂದು ಅಧಿಕಾರಿಗಳು ತಲುಪಿಸುತ್ತಾರೆ ಎಂದು ಮಳವಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ: ಕೆ ಅನ್ನದಾನಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.

ಅವರು ಇಂದು ಬಂಡೂರಿನಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲಾಧಿಕಾರಿಗಳು ಸೇರಿದಂತೆ ಇನ್ನಿತರ ಅಧಿಕಾರಿಗಳು ಗ್ರಾಮಸ್ಥರ ಬಳಿ ಬಂದು ಅವರ ಕಷ್ಟಗಳನ್ನು ಕೇಳುತ್ತಿದ್ದಾರೆ. ಮೊದಲು ಒಬ್ಬ ವಿಕಲಚೇತನ ಮಾಶಾಸನ ಮಂಜೂರಾತಿಗಾಗಿ ಹಲವು ಬಾರಿ ಸರ್ಕಾರಿ ಕಚೇರಿಗೆ ಅಲೆದಾಡಬೇಕಿತ್ತು. ಈಗ ಅಂತಹ ಪರಿಸ್ಥಿತಿ ಇಲ್ಲ ಎಂದರು.

ಆರ್.ಟಿ.ಸಿ ಯಲ್ಲಿ ಹೆಸರಿನಲ್ಲಿ ಸಣ್ಣಪುಟ್ಟ ತಿದ್ದುಪಡಿಗಾಗಿ ರೈತರು ವರ್ಷಗಟ್ಟಲೆ ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಾರೆ. ಹೆಸರುಗಳಲ್ಲಿ ತಪ್ಪುಗಳನ್ನು ಮಾಡದಂತೆ ಸಿಬ್ಬಂದಿಗಳು ಎಚ್ಚರಿಕೆ ವಹಿಸಬೇಕು ಎಂದರು.

ಜನರು ಈಗ ಶಿಕ್ಷಿತರಾಗುತ್ತಿದ್ದಾರೆ. ಅವರು ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳನ್ನು ಪ್ರಶ್ನಿಸುತ್ತಾರೆ. ಅಧಿಕಾರಿಗಳು ಯಾವುದೇ ಲೋಪ ಉಂಟುಮಾಡದೇ ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಿ. ಕಂದಾಯ ಇಲಾಖೆ ಬಡವರು, ನಿರ್ಗತಿಕರಿಗೆ ಸೇವೆ ನೀಡುವ ಇಲಾಖೆಯಾಗಿದೆ. ಅವರ ಕೆಲಸಗಳನ್ನು ಶ್ರದ್ಧೆಯಿಂದ ಮಾಡಿಕೊಡಿ ಎಂದರು.

ಭಾರೀ ಮಳೆಯ ಹಿನ್ನಲೆಯಲ್ಲಿ ರಸ್ತೆಗಳು ದುರಸ್ತಿಯಾಗಿದ್ದು, ಬೆಳೆ, ಕೆರೆ ಕೋಡಿಗಳು ಹಾನಿಗೆ ಒಳಗಾಗಿದೆ. ಮಳವಳ್ಳಿ ತಾಲ್ಲೂಕಿನಲ್ಲಿರುವ ರಸ್ತೆ ಹಾಗೂ ಸೇತುವೆಗಳನ್ನು ಸರಿಪಡಿಸಲು ೧೦೦ ಕೋಟಿ ಬೇಕಾಗುತ್ತದೆ. ಹಂತ ಹಂತವಾಗಿ ರಸ್ತೆ ದುರಸ್ತಿ ಕೆಲಸ ನಡೆಸಲಾಗುವುದು ಎಂದರು.

ಜಿಲ್ಲಾಧಿಕಾರಿ ಡಾ: ಎಚ್.ಎನ್ ಗೋಪಾಲಕೃಷ್ಣ ಅವರು ಮಾತನಾಡಿ ಸರ್ಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ಫಲಾನುಭವಿಗೂ ತಲುಪಬೇಕು. ತಲುಪಿರುವುದು ಆಧಿಕಾರಿಗಳಿಗೆ ಖಾತ್ರಿಯಾಬೇಕು ಎಂಬುದು ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ ಎಂದರು.

ರೈತರು ಹಾಗೂ ಬಡ ಜನರ ಕೆಲಸವನ್ನು ಕಂದಾಯ ಇಲಾಖೆ ನಿರ್ವಹಿಸುತ್ತದೆ.ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅವರಿಗೆ ಸರ್ಕಾರದ ಆದೇಶಗಳು, ಸುತ್ತೋಲೆ ಹಾಗೂ ಯೋಜನೆಗಳ ಕುರಿತು ರೈತರಿಗೆ ನಿಖರ ಮಾಹಿತಿ ನೀಡಿ ಎಂದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಜನರ ಸಮಸ್ಯೆಗಳನ್ನು ಕಡಿಮೆ ಮಾಡಬೇಕು. ಈ ಹಿನ್ನಲೆಯಲ್ಲಿ ೧೫ ದಿನಗಳಿಂದ ಬಂಡೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಸ್ಥಳದಲ್ಲೇ ೨೦೦ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಕೆಲವು ಅರ್ಜಿಗಳನ್ನು ಸ್ಥಳದಲೇ ಹಾಗೂ ಜಿಲ್ಲಾ ಹಂತದಲ್ಲಿ ಪರಿಹರಿಸಬಹುದು. ಕೆಲವು ಸರ್ಕಾರದ ಹಂತದಲ್ಲಿ ಆಗಬೇಕಿದ್ದು ಅವುಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು ಅವರು ಮಾತನಾಡಿ ಅಧಿಕಾರಿಗಳನ್ನು ಗ್ರಾಮಗಳಿಗೆ ಭೇಟಿ ನೀಡಿ ರೈತರು ಹಾಗೂ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಒದಗಿಸುವುದೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ಕAದಾಯ ಇಲಾಖೆ ಹಗಲು ರಾತ್ರಿ ಕೆಲಸ ಮಾಡಿದರೂ ರೈತ ಪೌತಿ ಖಾತೆ, ದುರಸ್ತಿ, ಜಂಟಿ ಖಾತೆಗಳ ಸಮಸ್ಯೆ ಪರಿಹಾರವಾಗಿಲ್ಲ. ಇಂತಹ ಸಮಸ್ಯೆಗಳನ್ನು ಪರಿಹರಿಸಲು ಜಿಲ್ಲಾಡಳಿತ ಜನರ ಬಳಿ ಬಂದಿದೆ ಎಂದರು.

ಒಬ್ಬ ಗ್ರಾಮ ಸಹಾಯಕ ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡಿ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸೇತುವೆಯ ರೀತಿ ಕೆಲಸ ನಿರ್ವಹಿಸಿದರೆ ಇಡೀ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸರ್ಕಾರ ಆಯುಷ್ಮಾನ ಆರೋಗ್ಯ ಯೋಜನೆಯಡಿ ಎಪಿಎಲ್ ಪಡಿತರ ಚೀಟಿ ಅವರಿಗೆ ೧.೫ ಲಕ್ಷ ರೂ, ಬಿಪಿಎಲ್ ಪಡಿತರ ಚೀಟಿದಾರರಿಗೆ ೫ ಲಕ್ಷ ರೂ ವರೆಗೂ ಚಿಕಿತ್ಸೆ ನೀಡಲಾಗುವುದು. ಎಲ್ಲರೂ ಈ ಯೋಜನೆಯಡಿ ನೊಂದಾಯಿಸಿಕೊಳ್ಳಿ ಎಂದರು.

ಪೌತಿ ಖಾತೆಗೆ ಸಂಬAಧಿಸಿದAತೆ ೨೦೦೫ ಕ್ಕೂ ಹಿಂದೆ ಮೃತಪಟ್ಟಿದ್ದಲ್ಲಿ ಮರಣ ಪ್ರಮಾಣ ಪತ್ರದ ಅವಶ್ಯಕತೆ ಇಲ್ಲ ನಿಗದಿತ ನಮೂನೆಯಲ್ಲಿ ಪಂಚನಾಮೆ ಮಾಡಿಕೊಂಡರೆ ಸಾಕು ಎಂದರು.

ಇದೇ ಸಂದರ್ಭದಲ್ಲಿ ವಿವಿಧ ಇಲಾಖೆ ವತಿಯಿಂದ ತೆರೆಯಲಾಗಿದ್ದ ಸಾರ್ವಜನಿಕರಿಗೆ ಮಾಹಿತಿ ನೀಡುವ ಮಳಿಗೆಗಳನ್ನು ಶಾಸಕರು ಉದ್ಘಾಟಿಸಿದರು. ಆಯುಷ್ ಇಲಾಖೆ ವತಿಯಿಂದ ಆರೋಗ್ಯಕ್ಕೆ ಉಪಯುಕ್ತವಾಗಿರುವ ಕರ್ಜೂರದ ಕಷಾಯವನ್ನು ಗಣ್ಯರಿಗೆ ನೀಡಲಾಯಿತು. ಕಂದಾಯ ಇಲಾಖೆ ವತಿಯಿಂದ ಮಾಶಾಸನ ಮಂಜೂರಾತಿ ಪತ್ರ ಹಾಗೂ ಇನ್ನಿತರ ಸವಲತ್ತುಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಕೀರ್ತನಾ, ತಹಶೀಲ್ದಾರ್ ವಿಜಿಯಣ್ಣ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments