Friday, April 26, 2024
spot_img
HomeChamarajanagarಕೋವಿಡ್-19ರ ಒಮಿಕ್ರಾನ್ ತಡೆಗಾಗಿ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಚಾಲನೆ

ಕೋವಿಡ್-19ರ ಒಮಿಕ್ರಾನ್ ತಡೆಗಾಗಿ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಚಾಲನೆ

ಚಾಮರಾಜನಗರ: ವೇಗವಾಗಿ ಹರಡುತ್ತಿರುವ ಕೋವಿಡ್-19ರ ಒಮಿಕ್ರಾನ್ 3ನೇ ಅಲೆಯ ಪರಿಣಾಮಕಾರಿ ನಿಯಂತ್ರಣಕ್ಕಾಗಿ ನಗರದಲ್ಲಿ ಆಯೋಜಿಸಲಾಗಿದ್ದ ಮಾಸ್ಕ್ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಚಾಲನೆ ನೀಡಿದರು.

ನಗರದ ಭುವನೇಶ್ವರಿ (ಪಚ್ಚಪ್ಪ) ವೃತ್ತದಲ್ಲಿಂದು ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಕೋವಿಡ್ ನಿಯಂತ್ರಣಕ್ಕಾಗಿ ಸುರಕ್ಷಾ ಪಡೆಯ ಕಾರ್ಯಾಚರಣೆಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಹಸಿರು ನಿಶಾನೆ ತೋರಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ರಾಜ್ಯದ ಇತರೆ ಜಿಲ್ಲೆಗಳಲ್ಲಿ ಕೋವಿಡ್-19ರ ಒಮಿಕ್ರಾನ್ ವೈರಾಣು ವೇಗವಾಗಿ ಹರಡುತ್ತಿದೆ. ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್ ಬಳಸಬೇಕು. ಆಗಮಾತ್ರ ಕೋವಿಡ್ ವೈರಸ್‌ನಿಂದ ಜಿಲ್ಲೆಯನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ಸಾರ್ವಜನಿಕರು ಈ ಬಗ್ಗೆ ಅರಿವು ಹೊಂದಬೇಕು ಎಂದರು.

ಜಿಲ್ಲೆ ಕೋವಿಡ್ ಲಸಿಕಾಕರಣ ಕಾರ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಿದೆ. ಮೊದಲ ಡೋಸ್ ನೀಡಿಕೆಯಲ್ಲಿ ಶೇ. 98ರಷ್ಟು ಗುರಿ ಸಾಧಿಸಿದೆ. 2ನೇ ಡೋಸ್ ನೀಡಿಕೆಯಲ್ಲಿ ಪ್ರಸ್ತುತ ಶೇ. 77ರಷ್ಟು ಪ್ರಗತಿಯಾಗಿದ್ದು, ಕೆಲವೇ ದಿನಗಳಲ್ಲಿ ನಿಗದಿತ ಸಾಧನೆಯಾಗಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ 15ರಿಂದ 18ರ ವಯಸ್ಸಿನ ಶಾಲಾ ಮಕ್ಕಳಿಗೂ ಲಸಿಕೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಲ್ಲರೂ ಎಚ್ಚರದಿಂದ ಇರಬೇಕಾಗಿರುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ನಗರ, ಪಟ್ಟಣ ಪ್ರದೇಶಗಳು ಹಾಗೂ ಹೆಚ್ಚಿನ ಜನಸಂಖ್ಯೆಯಿAದ ಕೂಡಿರುವ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚಿನ ಜನ ಗುಂಪುಗೂಡಬಾರದು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕರು ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ನಾಗರಿಕರಲ್ಲಿ ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಮಾತನಾಡಿ ಕಳೆದ 2 ತಿಂಗಳಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಜನರು ಮಾಸ್ಕ್ ಧರಿಸುವುದನ್ನೇ ಮರೆತಿದ್ದಾರೆ. ಮುಂದಿನ ದಿನಗಳಲ್ಲಿ ಹಬ್ಬಗಳು ಅಗಮಿಸುತ್ತಿರುವುದರಿಂದ ಜನರು ಕೋವಿಡ್ ತಡೆಗಾಗಿ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಇಂದಿನಿAದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುತ್ತಿದೆ. ಮಾಸ್ಕ್ ಧರಿಸದವರಿಗೆ ಸ್ಥಳದಲ್ಲೇ ದಂಡ ವಿಧಿಸಲಾಗುವುದು. ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಕೆ. ಸುರೇಶ್, ನಗರಸಭೆ ಪೌರಾಯುಕ್ತರಾದ ಕರಿಬಸವಯ್ಯ, ಡಿ.ವೈ.ಎಸ್.ಪಿ ಪ್ರಿಯದರ್ಶಿನಿ ಸಾಣೆಕೊಪ್ಪ, ಇತರರು ಇದ್ದರು.

ಬಳಿಕ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾ ಸಾರಾ ಥಾಮಸ್ ಅವರು ಎಲ್ಲಾ ಅಧಿಕಾರಿಗಳೊಂದಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ವಿವಿಧ ಅಂಗಡಿಗಳಿಗೆ ತೆರಳಿ ಅಂಗಡಿ ಮಾಲೀಕರು ಹಾಗೂ ಜನರಿಗೆ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಿದರು. ನಂತರ ಚಾಮರಾಜೇಶ್ವರ ದೇವಾಲಯಕ್ಕೂ ತೆರಳಿ ಅಲ್ಲಿ ಸೇರಿದ್ದ ಜನರಿಗೂ ಸಹ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಾಗೃತಿ ಮೂಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments