Monday, April 29, 2024
spot_img
HomeMandyaಸಮುದಾಯ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ: ಜಿ. ಪಂ ಉಪಕಾರ್ಯದರ್ಶಿ ಜಿ.ಧನರಾಜು

ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಿ: ಜಿ. ಪಂ ಉಪಕಾರ್ಯದರ್ಶಿ ಜಿ.ಧನರಾಜು

ಮಂಡ್ಯ: ಮಳವಳ್ಳಿ: ನರೇಗಾ ಯೋಜನೆಯಡಿಯಲ್ಲಿ ಸಮುದಾಯ ಮತ್ತು ವೈಯಕ್ತಿಕ ಕಾಮಗಾರಿಗಳನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ(ಅಭಿವೃದ್ಧಿ) ಜಿ.ಧನರಾಜು ತಿಳಿಸಿದರು.
ತಾಲ್ಲೂಕಿನ ಬಂಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಸಿಯಾಲಪುರ ಗ್ರಾಮದಲ್ಲಿ ಬುಧವಾರ ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಮಹಾತ್ಮ ಗಾಂಧಿ ನರೇಗೋತ್ಸವ, ಉದ್ಯೋಗ ಖಾತ್ರಿ ರೋಜಗಾರ ದಿನಾಚರಣೆ, ನರೇಗಾ  ಕೂಲಿಕಾರರ ಆರೋಗ್ಯ ಶಿಬಿರ ಮತ್ತು ಆಟೋಟ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 ಗ್ರಾಮೀಣ ಬಡಜನರ ಜೀವನೋಪಾಯದ ಮಟ್ಟವನ್ನು ಸುಧಾರಿಸುವುದು ನರೇಗಾ ಯೋಜನೆಯ ಗುರಿಯಾಗಿದೆ. ಆ ನಿಟ್ಟಿನಲ್ಲಿ ಪ್ರತಿ ಕುಟುಂಬಕ್ಕೆ ಆರ್ಥಿಕ ವಷರ್Àದಲ್ಲಿ ಕನಿಷ್ಠ 100 ದಿನಗಳ ಉದ್ಯೋಗ ನೀಡುವ ಗುರಿಯೊಂದಿಗೆ ಅವರ ಜೀವನಕ್ಕೆ ಭದ್ರತೆ ನೀಡಲಾಗುತ್ತಿದೆ. ಪ್ರತಿ ಕುಟುಂಬವು ಉದ್ಯೋಗ ಚೀಟಿ ಪಡೆದುಕೊಂಡು ಉದ್ಯೋಗ ಚೀಟಿಯಲ್ಲಿ ಹೆಸರಿರುವ ಕುಟುಂಬದ ಎಲ್ಲಾ ವಯಸ್ಕರು, ಅಕುಶಲ ದೈಹಿಕ ಕೆಲಸಕ್ಕಾಗಿ ಅರ್ಜಿ ಸಲ್ಲಿಸಿ ಕೆಲಸ  ಪಡೆಯಬಹುದಾಗಿದೆ ಎಂದರು.
ಮಹಿಳೆಯರಿಗೆ, ಪುರುಷರಿಗೆ ಸಮಾನ ಕೂಲಿ, ಕೆಲಸಕ್ಕೆ ಬೇಡಿಕೆ ಸಲ್ಲಿಸಿದ ಹದಿನೈದು ದಿನದೊಳಗೆ ಉದ್ಯೋಗ ನೀಡಲಾಗುವುದು. ತೋಟಗಾರಿಕೆ ಇಲಾಖೆ, ರೇμÉ್ಮ ಇಲಾಖೆ, ಅರಣ್ಯ ಇಲಾಖೆ, ಕೃಷಿ ಅರಣ್ಯ ಕಾಮಗಾರಿಗಳು, ಕೃಷಿ ಹೊಂಡ, ಇಂಗು ಗುಂಡಿ, ಭೂ ಅಭಿವೃದ್ಧಿ, ಗ್ರಾಮೀಣ ಗೋದಾಮು, ಜಮೀನು ಸುತ್ತಲು ತೋಟಗಾರಿಕಾ ಸಸಿಗಳನ್ನು ನೆÀಡುವುದು ಸೇರಿದಂತೆ ಅನೇಕ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಬಳಕೆ ಮಾಡಿಕೊಳ್ಳಬಹುದು.
ಕೆರೆ ಹೂಳೆತ್ತುವುದು, ಗೋ ಕಟ್ಟೆ ನಿರ್ಮಾಣ, ಹೊಸ ಕೆರೆ ನಿರ್ಮಾಣ, ಸ್ಮಶಾನ ಅಭಿವೃದ್ಧಿ, ಸರ್ಕಾರಿ ಶಾಲೆಗಳ ಆಟದ ಮೈದಾನ ಅಭಿವೃದ್ಧಿ, ಜಾನುವಾರುಗಳಿಗೆ ಕುಡಿಯುವ ನೀರಿನ ತೊಟ್ಟಿ, ಅಂಗನವಾಡಿ ಕಟ್ಟಡಗಳು ಸೇರಿದಂತೆ ಇತರೆ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಬಹುದು ಎಂದರು.
ಸುಮಾರು 500ಕ್ಕೂ ಅಧಿಕ ಮಂದಿ ನರೇಗಾ ಕೂಲಿಕಾರರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಆಟೋಟಗಳಲ್ಲಿ ಭಾಗಿಯಾಗಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತಿ ಅಧ್ಯಕ್ಷೆ ರಮ್ಯಾ ವೆಂಕಟೇಶ್ ವಹಿಸಿದರು.
ತಾಲ್ಲೂಕು ಪಂಚಾಯಿತಿ ಸಿಇಒ ರಾಮಲಿಂಗಯ್ಯ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರುದ್ರಯ್ಯ, ನರೇಗಾ ಸಹಾಯಕ ನಿರ್ದೇಶಕ ದೀಪು, ಜಿಲ್ಲಾ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮುನಿರಾಜು, ಗ್ರಾ.ಪಂ.ಉಪಾಧ್ಯಕ್ಷ ರಮೇಶ್, ಪಿಡಿಒ ಕುಮಾರ್, ಗ್ರಾ.ಪಂ.ಸದಸ್ಯರು, ನರೇಗಾ ನೌಕರರ ಸಂಘದ ಸದಸ್ಯರು, ಕಾಯಕ ಬಂಧು, ಕೂಲಿಕಾರರು ಸೇರಿದಂತೆ ಮತ್ತಿತರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments