Tuesday, April 23, 2024
spot_img
HomeChamarajanagarಪುನೀತ್ ರಾಜ್‌ಕುಮಾರ್ ನೇತ್ರದಾನ ಆದರ್ಶ : ಜಿಲ್ಲಾಡಳಿತ ವತಿಯಿಂದ ನೇತ್ರದಾನ ಅಭಿಯಾನ-೪೬ ಸಾವಿರ ಜನರನ್ನು ನೇತ್ರದಾನಕ್ಕೆ...

ಪುನೀತ್ ರಾಜ್‌ಕುಮಾರ್ ನೇತ್ರದಾನ ಆದರ್ಶ : ಜಿಲ್ಲಾಡಳಿತ ವತಿಯಿಂದ ನೇತ್ರದಾನ ಅಭಿಯಾನ-೪೬ ಸಾವಿರ ಜನರನ್ನು ನೇತ್ರದಾನಕ್ಕೆ ನೊಂದಾಯಿಸುವ ಮಹತ್ವದ ತೀರ್ಮಾನ

-ಪಾಲಾರ್ ಪತ್ರಿಕೆ –
ಚಾಮರಾಜನಗರ: ಹೆಸರಾಂತ ಚಲನಚಿತ್ರ ನಟ ದಿವಂಗತ ಪುನೀತ್ ರಾಜ್‌ಕುಮಾರ್ ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಚಾಮರಾಜನಗರ ತವರು ಜಿಲ್ಲೆಯ ಈ ಮಹಾನ್ ನಟರ ಆದರ್ಶವನ್ನು ಇನ್ನಷ್ಟು ಸಾರ್ಥಕತೆಗೊಳಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಪುನೀತ್ ರಾಜ್‌ಕುಮಾರ್ ಅವರ ಗೌರವಾರ್ಥ ಮಹತ್ವದ ನೇತ್ರದಾನ ಅಭಿಯಾನ ಆರಂಭಿಸಲಿದೆ.

 ಚಾಮರಾಜನಗರ ಜಿಲ್ಲೆಯ ಪ್ರಮಾಸೋದ್ಯಮ ರಾಯಭಾರಿಯಾಗಿದ್ದ ನಟ ಪುನೀತ್ ರಾಜ್‌ಕುಮಾರ್ ಅವರ ಮಾನವೀಯ ಸೇವಾ ಕಾರ್ಯಗಳು ಸದಾ ಸ್ಮರಣೀಯವಾದದ್ದು, ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಪುನೀತ್ ರಾಜ್ ಕುಮಾರ್ ಅವರ ನೇತ್ರದಾನದ ಆದರ್ಶವನ್ನಿಟ್ಟುಕೊಂಡು ನವೆಂಬರ್ ಅಂತ್ಯದೊಳಗೆ ೧೦ ಸಾವಿರ ಜನರನ್ನು ನೇತ್ರದಾನಕ್ಕಾಗಿ ನೊಂದಾಯಿಸುವ ಕಾರ್ಯದ ಗುರಿಯನ್ನು ಹೊಂದಿದೆ. ಪುನೀತ್ ರಾಜ್‌ಕುಮಾರ್ ಅವರು ೪೬ನೇ ವಯಸ್ಸಿನಲ್ಲಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟಾರೆ ೪೬ ಸಾವಿರ ಜನರನ್ನು ನೇತ್ರದಾನಕ್ಕಾಗಿ ನೊಂದಾಯಿಸುವ ಮಹತ್ತರ ಉದ್ದೇಶ ಹೊಂದಲಾಗಿದೆ.

   ಪುನೀತ್ ರಾಜ್‌ಕುಮಾರ್ ಅವರನ್ನು ಅದರ್ಶವಾಗಿಟ್ಟುಕೊಂಡು ನೇತ್ರದಾನ ಮಾಡುವಂತೆ ಸಾರ್ವಜನಿಕರು, ಕಾಲೇಜು ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶ ಹೊಂದಲಾಗಿದೆ. ಇದಕ್ಕಾಗಿಯೇ ರೆಡ್‌ಕ್ರಾಸ್ ಹಾಗೂ ಜಿಲ್ಲಾಸ್ಪತ್ರೆ ಸಹಯೋಗದಲ್ಲಿ ಎಲ್ಲೆಡೆ ನೇತ್ರದಾನ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಶಿಬಿರಗಳ ಯಶಸ್ಸಿಗೆ ಜಿಲ್ಲೆಯ ಸ್ವಯಂ ಸೇವಾ ಸಂಸ್ಥೆಗಳು, ನೆಹರು ಯುವ ಕೇಂದ್ರ ಇನ್ನಿತರ ಸಂಘ ಸಂಸ್ಥೆಗಳ ಸಹಕಾರವನ್ನು ಪಡೆಯಲಿದೆ.

  ಜಿಲ್ಲೆಯಲ್ಲಿ ನಿರ್ಮಿಸಲಾಗುವ ಕಣ್ಣಿನ ಅಸ್ಪತ್ರೆಗೆ ಪುನೀತ್ ರಾಜ್‌ಕುಮಾರ್ ಅವರ ಗೌರವಾರ್ಥ ಅವರ ಹೆಸರನ್ನೆ ಇಡುವ ಮೂಲಕ ಜಿಲ್ಲೆಯ ಗೌರವ ಸಲ್ಲಿಸುವ ಮಹತ್ವದ ತೀರ್ಮಾನವನ್ನು ಜಿಲ್ಲಾಡಳಿತ ಕೈಗೊಂಡಿದೆ. 

  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರ ಅಧ್ಯಕ್ಷತೆಯಲ್ಲಿ ನೇತ್ರದಾನ ಅಭಿಯಾನ ಕುರಿತು ಆರೋಗ್ಯ ಇಲಾಖೆ, ಇತರೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. 

 ಸಭೆಯ ಆರಂಭದಲ್ಲೇ ಮಾತನಾಡಿದ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಚಾಮರಾಜನಗರ ಜಿಲ್ಲೆಯ ಪ್ರವಾಸೋದ್ಯಮ ರಾಯಭಾರಿಯಾಗಿದ್ದ ಹಾಗೂ ತವರೂರಿನ ನಟ ಆಗಿದ್ದ ದಿವಂಗತ ಪುನೀತ್ ರಾಜ್‌ಕುಮಾರ್ ಅವರಿಗೆ ಜಿಲ್ಲೆಯ ವತಿಯಿಂದ ಗೌರವಪೂರ್ವಕ ಸ್ಮರಣೀಯ ಕಾರ್ಯವನ್ನು ಹಮ್ಮಿಕೊಳ್ಳಬೇಕಿದೆ. ಯಾವುದೇ ವ್ಯಕ್ತಿ ಮರಣ ಹೊಂದಿದ ನಂತರ ಕಣ್ಣುಗಳು ಮಣ್ಣಾಗಬಾರದು. ಆ ಕಣ್ಣುಗಳು ಜೀವಂತವಿದ್ದು ಇತರೆ ಅಂಧರಿಗೆ ದಾರಿದೀಪವಾಗಬೇಕು. ಪುನೀತ್ ರಾಜ್‌ಕುಮಾರ್ ಅವರ ನೇತ್ರದಾನ ಆದರ್ಶ ಎಲ್ಲರಲ್ಲಿಯೂ ಬರಬೇಕು. ಇದಕ್ಕಾಗಿ ಜಿಲ್ಲೆಯಾದ್ಯಂತ ನೇತ್ರದಾನ ಅಭಿಯಾನ ಕಾರ್ಯಕ್ರಮ ಹಮ್ಮಿಕೊಂಡು ಜನರನ್ನು ಜಾಗೃತಗೊಳಿಸಬೇಕಾಗಿದೆ ಎಂದರು.

 ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ನೇತ್ರದಾನ ಅಭಿಯಾನ ಹಮ್ಮಿಕೊಳ್ಳುವ ಉದ್ದೇಶದಿಂದ ಎಲ್ಲಾ ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಸಮಿತಿ ರಚಿಸುವಂತೆ ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದರು.

  ವಿಕಲಚೇತನರ ಇಲಾಖೆಯ ವರದಿಯನ್ವಯ ಜಿಲ್ಲೆಯಲ್ಲಿ ೩೫೦೦ ಅಂಧರಿದ್ದಾರೆ. ಜಿಲ್ಲೆಯಲ್ಲಿ ಎಷ್ಟು ಮಂದಿ ಅಂಧರಿದ್ದಾರೆ ಎಂಬುದನ್ನು ಸರ್ವೇ ಕಾರ್ಯ ಆರಂಭಿಸುವ ಅಗತ್ಯವಿದೆ. ಇದಕ್ಕಾಗಿ ವ್ಯವಸ್ಥಿತವಾದ ಗುರಿ ನಿಗದಿಪಡಿಸಿಕೊಳ್ಳಬೇಕು. ಜಿಲ್ಲಾಡಳಿತ ಭವನದಲ್ಲಿಯೂ ಸಹ ಒಂದು ದಿನದ ಶಿಭಿರವನ್ನು ಆಯೋಜಿಸಲಾಗುವುದು. ನೇತ್ರದಾನ ಶಿಬಿರದಲ್ಲಿ ದೃಷ್ಠಿದಾನಕ್ಕಾಗಿ ನೊಂದಾಯಿತರಾದವರಿಗೆ ನೀಡಲು ಅರ್ಜಿ ನಮೂನೆ, ಪ್ರಮಾಣಪತ್ರ ಹಾಗೂ ಗುರುತಿನ ಚೀಟಿಯನ್ನು ಸಿದ್ದಪಡಿಕೊಳ್ಳುವಂತೆ ಆರೋಗ್ಯ ಇಲಾಖೆಗೆ ಜಿಲ್ಲಾಧಿಕಾರಿಯವರು ಸೂಚಿಸಿದರು.

  ಜಿಲ್ಲೆಯಲ್ಲಿ ಕಣ್ಣಿನ ಆಸ್ಪತ್ರೆಯ ಅವಶ್ಯವಿದ್ದು, ಈಗಾಗಲೇ ಜಾಗ ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಾಗ ಲಭ್ಯವಿಲ್ಲದಿದ್ದರೆ ಸರ್ಕಾರದಿಂದಲೇ ಸ್ಥಳ ನೀಡಲಾಗುವುದು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ನಿರ್ಮಾಣ ಮಾಡಲಿರುವ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ನಿಧಿ ಕೇಂದ್ರ (ಇಥಿe ಃಚಿಟಿಞ) ವನ್ನು ಸ್ಥಾಪಿಸಲಾಗುವುದು ಜಿಲ್ಲೆಯಲ್ಲಿ ನಿರ್ಮಾಣ ಮಾಡುವ ಕಣ್ಣಿನ ಆಸ್ಪತ್ರೆಗೆ ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನೇ ಇಡೆಉವ ಮೂಲಕ ಜಿಲ್ಲಾಡಳಿತ ಗೌರವ ಸಲ್ಲಿಸಲಿದೆ ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 

  ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರಾದ ಡಾ. ಸಂಜೀವ್, ಜಿಲ್ಲಾಸ್ಪತ್ರೆಯ ನೋಡೆಲ್ ಅಧಿಕಾರಿ ಡಾ. ಮಹೇಶ್, ಜಿಲ್ಲಾ ರ್ವೇಲೆನ್ಸ್ ಘಟಕದ ಅಧಿಕಾರಿ ಡಾ. ನಾಗರಾಜು. ಇತರರು ಸಭೆಯಲ್ಲಿ ಹಾಜರಿದ್ದರು.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments