Thursday, April 25, 2024
spot_img
HomeRamnagarಒಗ್ಗಟ್ಟಿನಲ್ಲಿ ಎಲ್ಲರೂ ಕೆಲಸ ನಿರ್ವಹಿಸಿದರೆ ಮಾತ್ರ ಮಕ್ಕಳ ಸಂರಕ್ಷಣೆ ಸಾಧ್ಯ : ನಾಗಣ್ಣಗೌಡ

ಒಗ್ಗಟ್ಟಿನಲ್ಲಿ ಎಲ್ಲರೂ ಕೆಲಸ ನಿರ್ವಹಿಸಿದರೆ ಮಾತ್ರ ಮಕ್ಕಳ ಸಂರಕ್ಷಣೆ ಸಾಧ್ಯ : ನಾಗಣ್ಣಗೌಡ

ರಾಮನಗರ :  ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದವತಿಯಿಂದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ “ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಇವರ ಅಧ್ಯಕ್ಷತೆಯಲ್ಲಿ ಆರ್.ಟಿ.ಇ-2009, ಪೋಕ್ಸೋ- 2012 ಹಾಗೂ ಬಾಲ ನ್ಯಾಯಾ ಕಾಯ್ದೆ -2015ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ” ಮಾನ್ಯ ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳು ಆಯೋಗದ ಅಧ್ಯಕ್ಷರಾದ ನಾಗಣ್ಣ ಗೌಡ ನೇತೃತ್ವದಲ್ಲಿ ಒಟ್ಟು 29 ಇಲಾಖೆಗೆ ಸಂಬಂಧಿಸಿದಂತೆ ಅಂಕಿ ಅಂಶಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷರು ಮಾತನಾಡಿ ಮಕ್ಕಳ ಸಂರಕ್ಷಣೆ ಎಲ್ಲಾ ಇಲಾಖೆಗಳ ಕರ್ತವ್ಯ 18 ವರ್ಷದೊಳಗಿನ ಎಲ್ಲಾ ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕರ್ತವ್ಯ ನಿರ್ವಹಿಸುವುದು ಎಲ್ಲರ ಜವಾಬ್ದಾರಿ ಆಗಿರುತ್ತದೆ. ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ, ಬಾಲಕಾರ್ಮಿಕತೆ, ಎಲ್ಲಾ ಇಲಾಖೆಗಳ ಒಗ್ಗಟ್ಟಿನಲ್ಲಿ ಹೋಗಿ ತಡೆ ಗಟ್ಟುವುದು ಬಹಳ ಮುಖ್ಯವಾಗಿರುತ್ತದೆ. ಇಲಾಖೆಗಳೆಲ್ಲ ಒಟ್ಟಿನಿಂದ ಕೆಲಸ ನಿರ್ವಹಿಸಿದರೆ ಮಾತ್ರ ಮಕ್ಕಳ ಸಂರಕ್ಷಣೆ ಮಾಡಲು ಸಾಧ್ಯವಾಗಿರುತ್ತದೆ ಎಂದು ನಾಗಣ್ಣಗೌಡ ಹೇಳಿದರು.  ಅಧ್ಯಕ್ಷರು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಶ್ರೀಮತಿ ಅನಿತಾ ಎನ್. ಪಿ ಗೌರವಾನ್ವಿತ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಜವರೇಗೌಡ ಅಪರ ಜಿಲ್ಲಾಧಿಕಾರಿಗಳು, ನಾರಾಯಣಸ್ವಾಮಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಾಗವೇಣಿ .ವಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಇತರ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments