Wednesday, April 24, 2024
spot_img
HomeRamnagarಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಗೋವಿಂದ ರಾಜು

ಹೇಮರೆಡ್ಡಿ ಮಲ್ಲಮ್ಮ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸೋಣ: ಗೋವಿಂದ ರಾಜು

ಪಾಲಾರ್ ಪಾತ್ರಿಕೆ | Palar Pathrike 

ರಾಮನಗರ : ಹೇಮರೆಡ್ಡಿ ಮಲ್ಲಮ್ಮ ಅವರ ಬದುಕೇ ಒಂದು ಮಹಾನ್ ಗ್ರಂಥ. ಸನ್ಯಾನಿಸಿ, ಸಾಂಸಾರಿಕ ಜೀವನ ನಡೆಸುತ್ತಲೂ ಸಾಧನೆ ಮಾಡಬಹುದು ಎಂಬುದನ್ನು ನಿರೂಪಿಸಿದರು ಎಂದು ಸಮುದಾಯದ ಮುಖಂಡರಾದ ಗೋವಿಂದ ರಾಜು ಅವರು ತಿಳಿಸಿದರು.ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀಶೈಲದ ದಕ್ಷಿಣಕ್ಕಿರುವ ವೆಲ್ಲಟೂರು ಜಿಲ್ಲೆಯ ರಾಮಪುರದ ರಡ್ಡಿ ಅರಸೊತ್ತಿಗೆಯ ನಾಗರಡ್ಡಿ-ಗೌರಮ್ಮ ದಂಪತಿಗಳಿಗೆ ಜನಿಸಿದ ಮಲ್ಲಮ್ಮ ಬಾಲ್ಯದಲ್ಲಿಯೇ ಸದಾಕಾಲ ಶ್ರೀಶೈಲ ಮಲ್ಲಿಕಾರ್ಜುನನ ಪೂಜೆ, ಜಪ, ಧ್ಯಾನಗಳಲ್ಲಿ ಮಗ್ನಳಾಗುತ್ತಿದ್ದರು ಎಂದರು. ಎಲ್ಲೆಡೆಯಲ್ಲೂ ಮಲ್ಲಮ್ಮರ ಕೀರ್ತಿ ಬೆಳಗತೊಡಗಿತು. ಕಾಡಿಗೆ ಹೋಗಿ ಗೋವುಗಳನ್ನು ಕಾಯುತ್ತ ಮಲ್ಲಿಕಾರ್ಜುನನ ಉಪಾಸನೆಯಲ್ಲಿ ಮಗ್ನಳಾಗುತ್ತಿದ್ದರು ಎಂದು ತಿಳಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ರಮ್ಯ ಅವರು ಮಾತನಾಡಿ, ಮಲ್ಲಮ್ಮ ಜೀವನವಿಡಿ ಕಷ್ಟಗಳನ್ನುಂಡರೂ ತನಗೆ ನೋವುಂಟು ಮಾಡಿದವರ ಹಿತವನ್ನು ಬಯಸಿದರು. ಮನೆಯ ಒಡತಿಯಾಗಿದ್ದರೂ ದಾಸಿಯಂತೆ ಸೇವೆ ಸಲ್ಲಿಸಿ ಎಂತಹ ಕಷ್ಟದಲ್ಲಿಯೂ ಶಿವನನ್ನು ಸ್ಮರಿಸುತ್ತಿದ್ದರು ಎಂದರು.

ಮಲ್ಲಿಕಾರ್ಜುನನಿAದ ವರಪಡೆದ ಮಲ್ಲಮ್ಮ, ತನ್ನ ಬಳಗವನ್ನು ಕರೆದು ಸಂಪತ್ತಿಗೆ ಸೊಕ್ಕಬೇಡಿ, ದಾನಗುಣ ಬೆಳಸಿಕೊಳ್ಳಬೇಕು ಎಂದು ಹೇಳಿದರು ಎಂಬುದಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಿದೆ ಎನ್ನುತ್ತಾರೆ ದಾರ್ಶನಿಕರು. ಮಹಾಶಿವಶರಣೆಯಾಗಿ ಬೆಳಗಿದ ಹೇಮರಡ್ಡಿ ಮಲ್ಲಮ್ಮ 12ನೇ ಶತಮಾನದ ಶಿವಶರಣೆಯರಂತೆ ವಚನಗಳನ್ನು ರಚಿಸಲಿಲ್ಲವಾದರೂ ಅವರ ಬದುಕೇ ಒಂದು ಬೃಹತ್ ವಚನ ಸಂಪುಟದAತಿದೆ. ಅವರ ಜೀವನಮೌಲ್ಯಗಳು ಮನುಕುಲಕ್ಕೆ ಅದರಲ್ಲೂ ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಗಳಾಗಿವೆ ಎಂದು ತಿಳಿಸಿದರು. ಹೇಮರೆಡ್ಡಿ ಮಲ್ಲಮ್ಮ ಅವರ ಜೀವನ ಕುರಿತು ಎಸ್.ಸೌಂದರ್ಯರಾಜನ್ ನಿರ್ದೆಶನದಲ್ಲಿ ಗುಬ್ಬಿ ವೀರಣ್ಣ ಅವರು ನಿರ್ಮಿಸಿ ಬಿಡುಗಡೆಯಾದ ಕನ್ನಡ ಚಲನಚಿತ್ರ ಎಂದರು. ಕಲಾವಿದರಾದ ಶ್ರೀನಿವಾಸ್ ಅವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಬಾಬು ಹಾಗೂ ಇತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments