Friday, April 26, 2024
spot_img
HomeRamnagarಜಿಲ್ಲೆಯ ಮಕ್ಕಳನ್ನು ಜಂತುಹುಳು ಮುಕ್ತರನ್ನಾಗಿ ಮಾಡಲು ಕ್ರಮ ವಹಿಸಿ: ದಿಗ್ವಿಜಯ್ ಬೋಡ್ಕೆ

ಜಿಲ್ಲೆಯ ಮಕ್ಕಳನ್ನು ಜಂತುಹುಳು ಮುಕ್ತರನ್ನಾಗಿ ಮಾಡಲು ಕ್ರಮ ವಹಿಸಿ: ದಿಗ್ವಿಜಯ್ ಬೋಡ್ಕೆ

ಪಾಲಾರ್ ಪತ್ರಿಕೆ | Palar Pathrike

ರಾಮನಗರ : ಆರೋಗ್ಯ ಅಭಿಯಾನದಡಿ ರಾಮನಗರ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾರ್ಚ್-13ರಂದು ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಅಂಗವಾಗಿ 1 ರಿಂದÀ 19 ವರ್ಷದ ಮಕ್ಕಳಿಗೆ ಆಲ್‌ಬೆಂಡಜೋಲ್ ಮಾತ್ರೆಗಳನ್ನು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ/ಖಾಸಗಿ ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ವಿತರಿಸಲಾಗುತ್ತದೆ ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ತಿಳಿಸಿದರು.ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಷ್ಟಿçÃಯ ಜಂತುಹುಳು ನಿವಾರಣ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟಿçÃಯ ಜಂತುಹುಳು ನಿವಾರಣಾ ದಿನದಂದು ಜಂತುಹುಳು ನಾಶಕ ಮಾತ್ರೆ ನೀಡದೇ ಬಾಕಿ ಇರುವ ಮಕ್ಕಳಿಗೆ ಮಾರ್ಚ್ 14 ರಿಂದ 25 ರವರೆಗೆ ಮಾತ್ರೆಗಳನ್ನು ನೀಡಲಾಗುವುದು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿರುವ 01 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೂ ಆಲ್‌ಬೆಂಡಜೋಲ್ ಮಾತ್ರೆಗಳನ್ನು ನೀಡುತ್ತಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗಳು ಹಾಗೂ ಮತ್ತಿತರ ಇಲಾಖೆಗಳು ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅರ್ಹ ಮಕ್ಕಳಿಗೆ ಜಂತು ಹುಳು ನಾಶಕ ಮಾತ್ರೆಗಳನ್ನು ನೀಡಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಾಂತರಾಜು ಅವರು ಮಾತನಾಡಿ ಜಂತುಹುಳು ಬಾಧೆಯಿಂದ ಮಕ್ಕಳಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆ ಉಂಟಾಗಿ ದುರ್ಬಲ ಮಾನಸಿಕ ಮತ್ತು ದೈಹಿಕ ಬೆಳವಣಿಗೆ ಕುಂಠಿತಗೊಳ್ಳುವುದು, ಇದರಿಂದ ಮಕ್ಕಳು ಹೆಚ್ಚಾಗಿ ದಣಿದಂತಿರುತ್ತಾರೆ ಅಥವಾ ಅನಾರೋಗ್ಯ ಪೀಡಿತರಾಗಿ ಶಾಲೆಗೆ ಗೈರುಹಾಜರಿ ಆಗುತ್ತಾರೆ. ಆದ್ದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದಕ್ಕೆ ಈ ಆಲ್‌ಬೆಂಡಜೋಲ್ ಮಾತ್ರೆಯು ನೆರವಾಗುತ್ತದೆ. ಆದ್ದರಿಂದ 1 ರಿಂದ 19 ವರ್ಷದ ಎಲ್ಲಾ ಮಕ್ಕಳಿಗೂ ಜಂತುಹುಳು ನಾಶಕ ಮಾತ್ರೆಗಳನ್ನು ನೀಡಲಾಗುತ್ತಿದೆ ಎಂದು ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಮುಖ್ಯ ಉದ್ದೇಶದ ಬಗ್ಗೆ ತಿಳಿಸಿದರು.

ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ರಾಜು. ವಿ ಅವರು ಮಾತನಾಡಿ ಜಿಲ್ಲೆಯಲ್ಲಿ ಒಟ್ಟು 1 ರಿಂದ 19 ವರ್ಷದ ಮಕ್ಕಳು ಚನ್ನಪಟ್ಟಣ-80894, ಕನಕಪುರ-105570, ಮಾಗಡಿ-61716 ಹಾಗೂ ರಾಮನಗರ-84786 ರಂತೆ ಒಟ್ಟು 332966 ಮಕ್ಕಳ ಗುರಿಯಿದ್ದು, ಇವರುಗಳಿಗೆ 1543 ಅಂಗನವಾಡಿ ಕೇಂದ್ರಗಳು ಹಾಗೂ 1629 ಶಾಲಾ – ಕಾಲೇಜುಗಳಲ್ಲಿ (ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಸೇರಿದಂತೆ) ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತಿದೆ ಎಂದರು.

1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ (200 ಮಿ.ಗ್ರಾ) ಮಾತ್ರೆಗಳನ್ನು 2 ರಿಂದ 19 ವರ್ಷದ ಮಕ್ಕಳಿಗೆ ಆಲ್‌ಬೆಂಡಜೋಲ್ (400ಮಿ.ಗ್ರಾ) ಮಾತ್ರೆಗಳನ್ನು ನೀಡಲಾಗುವುದು ಒಟ್ಟಾರೆಯಾಗಿ ರಾಮನಗರ ಜಿಲ್ಲೆಯ ಮಕ್ಕಳನ್ನು ಜಂತುಹುಳು ಮುಕ್ತರನ್ನಾಗಿ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಷ್ಟಿçÃಯ ಜಂತುಹುಳು ನಿವಾರಣಾ ಕಾರ್ಯಕ್ರಮದ ಭಿತ್ತಿಪತ್ರವನ್ನು ಬಿಡುಗಡೆ ಮಾಡಿದರು ಹಾಗೂ ಆಟೋ ಪ್ರಚಾರಕ್ಕೆ ಚಾಲನೆ ನೀಡಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ನಾರಾಯಣಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ಮಲ, ಡಿ.ಎಲ್.ಓ ಡಾ. ಮಂಜುನಾಥ್, ಡಿ.ಎಸ್.ಓ, ಡಾ. ಕಿರಣ್ ಶಂಕರ್, ಡಿ.ಎಂ.ಓ ಡಾ. ಶಶಿಧರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಎಸ್ ಗಂಗಾಧರ್, ತಾಲ್ಲೂಕು ಆರೋಗ್ಯ ಅಧಿಕಾರಿಗಳಾದ ಡಾ. ರಾಜು, ಡಾ. ಶಶಿಕಲಾ, ಡಾ. ಚಂದ್ರಶೇಖರ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments