Friday, April 19, 2024
spot_img
HomeRamnagarವಿಕಲಚೇತನರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಿ: ಡಾ. ಅವಿನಾಶ್ ಮೆನನ್ ರಾಜೇಂದ್ರನ್

ವಿಕಲಚೇತನರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಉಪಯೋಗಿಸಿಕೊಳ್ಳಿ: ಡಾ. ಅವಿನಾಶ್ ಮೆನನ್ ರಾಜೇಂದ್ರನ್

ಪಾಲಾರ್ ಪತ್ರಿಕೆ | Palar Patrike

ರಾಮನಗರ: ವಿಕಲಚೇತನರು ಮಾನಸಿಕವಾಗಿ ಬಲಶಾಲಿಗಳಾಗಿರುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗ್ರಾಮೀಣ ಪುನರ್ವಸತಿ ಯೋಜನೆಯ ಕಾರ್ಯಕರ್ತರುಗಳು ಹಾಗೂ ವಿಕಲಚೇತರನ ಏಳಿಗೆಗಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸಂಘ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಿಕಲಚೇತನರು ತಮ್ಮಲ್ಲಿರುವ ಪ್ರತಿಭೆಯನ್ನು ಹೊರತರಬೇಕು. ವಿಕಲಚೇತನರೂ ಸಹ ಸಮಾಜದಲ್ಲಿ ಒಳಗೊಂಡು ಎಲ್ಲರಂತೆ ಸಮಾಜದಲ್ಲಿ ಬದುಕಲು ಸರ್ಕಾರದಿಂದ ಹಲವಾರು ಸೌಲಭ್ಯಗಳನ್ನು ಕಲ್ಪಿಸಲಾಗಿದೆ.  ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗೆ ಭೇಟಿ ನೀಡಿ ಮಾಹಿತಿಯನ್ನು ತಿಳಿದು, ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ವಿಕಲಚೇತನರು ಸಹ ಇನ್ನೊಬ್ಬರಿಗೆ ಮಾರ್ಗದರ್ಶನವಾಗುವಂತಹ ಸಾಧನೆಗಳನ್ನು ಮಾಡಿ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ. ರಮೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ವಿಕಲಚೇತನ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕಗಳನ್ನುಗಳಿಸಿರುವುದು ಬಹಳ ಹೆಮ್ಮೆಯ ವಿಚಾರವಾಗಿದೆ ಎಂದರು.
ವಿಕಲಚೇತನÀ ಮಕ್ಕಳಿಗೆ ಸ್ಪೂರ್ತಿಯಾಗಿ ಧೈರ್ಯತುಂಬಿ ಅವರಿಗೆ ವಿದ್ಯಾಭ್ಯಾಸವನ್ನು ವಿಕಲಚೇತನರ ಭಾಷೆಯಲ್ಲೆ ತರಬೇತಿ ನೀಡುತ್ತಿರುವುದು ಬಹಳದೊಡ್ಡ ಕೆಲಸವಾಗಿದೆ. ವಿಕಲಚೇತನ ವಿದ್ಯಾರ್ಥಿಗಳಿಗೆ ತರಬೇತಿ ನೀಡುತ್ತಿರುವ ಪೋಷಕರಿಗೆ, ಶಿಕ್ಷಕರಿಗೆ ಹಾಗೂ ಸಂಘ ಸಂಸ್ಥೆಗಳಿಗೆ ಅಭಿನಂದನೆ ಸಲ್ಲಿಸಿದರು.
ವಿಕಲಚೇತನರಿಗಾಗಿ ಇರುವ ಸವಲತ್ತುಗಳನ್ನು, ಸಾಧನಾ ಸಲಕರಣೆಗಳನ್ನು ಸರ್ಕಾರದಿಂದ ನೀಡಲಾಗುತ್ತಿದೆ. ವಿಕಲಚೇತನರ ಸ್ವಾವಲಂಬನೆ ಬದುಕಿಗೆ ಹಾಗೂ ವಿಕಲಚೇತನರು ಯಾರ ಮೇಲು ಅವಲಂಭಿತರಾಗಬಾರದು ಎಂದು ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್‌ಗಳಲ್ಲೂ ಸಹ ವಿವಿಧ ಯೋಜನೆಗಳನ್ನು ಮಾಡಲಾಗಿದೆ. ವಿಶೇಷವಾಗಿ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಂತಹ ವಿಕಲಚೇತನರಿಗೆ ಶೇ. 50ರಷ್ಟು ಮಾತ್ರ ಕೆಲಸ ನೀಡಿ, ಪೂರ್ಣ ಪ್ರಮಾಣದಲ್ಲಿ ಸಂಭಾವನೆ ಕೊಡುವಂತಹ ಯೋಜನೆಯನ್ನು ಮಾಡಲಾಗಿದೆ. ಒಂದು ಕುಟುಂಬಕ್ಕೆ ಒಂದು ಜಾಬ್ ಕಾರ್ಡ್ ಇದ್ದರೆ. ವಿಕಲಚೇತನರಿಗಾಗಿಯೇ ಪ್ರತ್ಯೇಕ ಒಂದು ಜಾಬ್ ಕಾರ್ಡ್ ಸಹ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೂ ಸಹ ಶೇ. 50 ರಷ್ಟು ಕೆಲಸಗಳಲ್ಲಿ ರಿಯಾಯಿತಿ ನೀಡಲಾಗಿದೆ.
ವಿಕಲಚೇತನರಿಗೆ ಗ್ರಾಮ ಪಂಚಾಯತ್ ಮಟ್ಟದಲ್ಲಿ ಈಗಾಗಲೇ ಪಟ್ಟಿ ಮಾಡಿ ವೀಲ್‌ಚೇರ್, ಸ್ಕೂರ‍್ಸ್ ದಿನಬಳಕೆ ವಸ್ತುಗಳನ್ನು ನೀಡಲಾಗಿದೆ. ಇದರ ಜೊತೆಗೆ ಪೆಟ್ಟಿ ಅಂಗಡಿ, ತರಕಾರಿ ವ್ಯಾಪಾರ, ಹಸು ಸಾಕಾಣಿಕೆ, ಕೋಳಿ-ಕುರಿಗಳನ್ನು ಖರೀದಿ ಮಾಡಲು ಗ್ರಾಮ ಪಂಚಾಯತ್ ವತಿಯಿಂದ ವಿವಿಧ ಸವಲತ್ತುಗಳನ್ನು ನೀಡಲಾಗುತ್ತಿದೆ. ವಿಕಲಚೇತನರಿಗೆ ಸವಲತ್ತುಗಳು ಬೇಕಿದ್ದರೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗೆ ಮನವಿ ಸಲ್ಲಿಸಿದ್ದಲ್ಲಿ, ಇಲಾಖೆ ವತಿಯಿಂದ ಸವಲತ್ತುಗಳನ್ನು ಸಹ ನೀಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ವಿಕಲಚೇತನರು, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಏಳಿಗೆಗಾಗಿ ಶ್ರಮಿಸುತ್ತಿರುವ ಸರ್ಕಾರೇತರ ಸಂಘ ಸಂಸ್ಥೆಗಳ ಮುಖಂಡರಿಗೆ ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ನಾರಾಯಣಸ್ವಾಮಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ನಾಗವೇಣಿ, ಜಿಲ್ಲಾ ಶಸ್ತç ಚಿಕಿತ್ಸಕಿ ಡಾ. ಪದ್ಮಾ, ಡಿ.ಎಲ್.ಒ ಡಾ. ಮಂಜುನಾಥ್, ಇತರೆ ಅಧಿಕಾರಿಗಳು, ಹಿರಿಯ ನಾಗರೀಕರು, ವಿಕಲಚೇತನರು ಹಾಗೂ ಇತರರು ಉಪಸ್ಥಿತರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments