Wednesday, November 29, 2023
spot_img
HomeRamnagarಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಎ.ಮಂಜುನಾಥ್

ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಎ.ಮಂಜುನಾಥ್

ಪಾಲಾರ್ ಪತ್ರಿಕೆ | Palar Pathrike 

ರಾಮನಗರ: ರಾಜ್ಯದ ಅಭಿವೃದ್ಧಿಗೆ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬುದು ರಾಜ್ಯದ ಜನರ ಮನಸ್ಸಿನಲ್ಲಿದ್ದು, ಈ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಎ.ಮಂಜುನಾಥ್ ವಿಶ್ವಾಸ ವ್ಯಕ್ತಪಡಿಸಿದರು.ತಾಲ್ಲೂಕಿನ ಹೊಂಬಯ್ಯನದೊಡ್ಡಿಯ ಮಾರುತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ಆಯೋಜಿಸಲಾಗಿದ್ದ ಕೂಟಗಲ್ ಹೋಬಳಿಯ ಜೆಡಿಎಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕುಮಾರಸ್ವಾಮಿ ಅವರ ಪಂಚರತ್ನ ರಥಯಾತ್ರೆಯಿಂದಾಗಿ ರಾಜ್ಯದಲ್ಲಿ ಸಂಚಲನ ಆರಂಭವಾಗಿದೆ. ಜೆಡಿಎಸ್ ಪಕ್ಷದ ಬಗ್ಗೆ ಹಗುರುವಾಗಿ ಮಾತನಾಡುತ್ತಿದ್ದ ರಾಷ್ಟ್ರೀಯ ಪಕ್ಷಗಳು ಇಂದು ಕುಮಾರಸ್ವಾಮಿ ಅವರ ಪಂಚರತ್ನ ರಥಯಾತ್ರೆಯಿಂದ ಭಯ ಭೀತರಾಗಿದ್ದಾರೆ ಎಂದು ಹೇಳಿದರು.

ಡಿ-15 ರಂದು ಮಾಗಡಿಗೆ ಪಂಚರತ್ನ ರಥಯಾತ್ರೆ ಆಗಮಿಸಲಿದ್ದು, ಕೋಟೆ ಮೈದಾನದಲ್ಲಿ 50 ಸಾವಿರ ಕಾರ್ಯಕರ್ತರು ಸೇರಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮಾವೇಶ ಯಶಸ್ವಿಗೊಳಿಸುವ ಮೂಲಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲಿಷ್ಠವಾಗಿದೆ ಎಂಬ ಸಂದೇಶವನ್ನು ರಾಜ್ಯಕ್ಕೆ ರವಾನಿಸಬೇಕು ಎಂದು ಮನವಿ ಮಾಡಿದರು.

ಕೂಟಗಲ್ ಹೋಬಳಿ ವ್ಯಾಪ್ತಿಯಲ್ಲಿನ ಕೆರೆ ತುಂಬಿಸುವ ಯೋಜನೆ, ರಸ್ತೆ ಅಭಿವೃದ್ಧಿ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಜನರ ಸಮಸ್ಯೆಗಳಿಗೆ ಹತ್ತಿರದಿಂದ ಸ್ಪಂದಿಸುವ ಕೆಲಸ ಮಾಡಿದ್ದೇನೆ ಈ ಭಾಗದ ಜನರು ಜೆಡಿಎಸ್ ಪಕ್ಷದ ಪರವಾಗಿ ಸದಾ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಜೆಡಿಎಸ್ ಹಿರಿಯ ಮುಖಂಡ ಸುಬ್ಬಶಾಸ್ತಿç ಮಾತನಾಡಿ ಕೂಟಗಲ್ ಹೋಬಳಿಯಲ್ಲಿ ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಹೇಳುವ ವಿರೋಧಿಗಳಿಗೆ ಈ ಸಭೆ ಮೂಲಕ ತೋರಿಸಿಕೊಟ್ಟಿದ್ದೀರಿ, ಪ್ರಾದೇಶಿಕ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ, ಜೆಡಿಎಸ್ ಪಕ್ಷದ ಭದ್ರಕೋಟೆ ಕೂಟಗಲ್ ಹೋಬಳಿಯಿಂದ ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಪಂಚರಥ ಯಾತ್ರೆ ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

ನಿವೃತ್ತ ತಹಶೀಲ್ದಾರ್ ಶಿವಣ್ಣ ಮಾತನಾಡಿ ಬಡವರು, ಕೂಲಿ ಕಾರ್ಮಿಕರು, ರೈತರ ಅಭಿವೃದ್ಧಿಗಾಗಿ ಜೆಡಿಎಸ್ ಬೆಂಬಲಿಸಬೇಕು, ಈ ಬಾರಿ ಕರ್ನಾಟಕಕ್ಕೆ ಕುಮಾರಣ್ಣ ಮಾಗಡಿಗೆ ಮಂಜಣ್ಣ ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕರ್ತರು ಸಂಘಟಿತರಾಗಿ ಚುನಾವಣೆ ಎದುರಿಸಬೇಕೆಂದು ಕಾರ್ಯಕರ್ತರಿಗೆ ಕರೆ ನೀಡಿದರು.

ಇದೇ ಸಂದರ್ಭದಲ್ಲಿ ದೊಡ್ಡಗಂಗವಾಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚನ್ನಪ್ಪ, ನಿಂಗೇಗೌಡ ಆದಿಶಕ್ತಿಹಳ್ಳಿ ಚಂದ್ರು, ಸುನಿಲ್ ಕುಮಾರ್ ಎಸ್. ಮಹೇಶ, ಡಿ.ಎಸ್.ರವಿ (ಕಳಸೇಗೌಡ), ಶ್ಯಾನುಭೋಗನಹಳ್ಳಿ ಗ್ರಾಮ ಪಂಚಾಯ್ತಿ, ಕೂಟಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾದರು.

ವೇದಿಕೆಯಲ್ಲಿ ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷ ಪುಟ್ಟರಾಮಯ್ಯ, ಮಾಜಿ ಉಪಾಧ್ಯಕ್ಷ ವೆಂಕಟರAಗಯ್ಯ, ಗ್ರಾಮ ಪಂಚಾಯತಿ ಸದಸ್ಯರಾದ ಮಂಚೇಗೌಡ, ರಾಜು, ಮುಖಂಡರಾದ ಅಜಯ್ ದೇವೇಗೌಡ, ಅಕ್ಕೂರು ಶಿವು, ಅರೇಹಳ್ಳಿ ಮೂರ್ತಿ, ಹೊನ್ನಗಿರಿಗೌಡ, ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ವಿಎಸ್‌ಎಸ್‌ಎನ್ ಅಧ್ಯಕ್ಷರು, ಎಂಪಿಸಿಎಸ್ ಅಧ್ಯಕ್ಷರು, ಪಕ್ಷದ ಮುಖಂಡರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments