Thursday, April 25, 2024
spot_img
HomeChikballapurಉಚಿತ ಸಾಮೂಹಿಕ ವಿವಾಹ ಮಹೋತ್ಸವ

ಉಚಿತ ಸಾಮೂಹಿಕ ವಿವಾಹ ಮಹೋತ್ಸವ

ಪಾಲಾರ್ ಪತ್ರಿಕೆ | Palar Patrike

ಶಿಡ್ಲಘಟ್ಟ: ಇಂದಿನ ದುಬಾರಿ ಕಾಲದಲ್ಲಿ ಮದುವೆ ಮಾಡುವುದೆಂದೆರೆ ಕಷ್ಟದ ಕೆಲಸ. ಸಾಲ ಮಾಡಿ ಮದುವೆ ಮಾಡುವುದಕ್ಕಿಂತ ಸಾಲವಿಲ್ಲದೆ ಸರಳ ಸಾಮೂಹಿಕ ವಿವಾಹಗಳಲ್ಲಿ ಮದುವೆ ಮಾಡಿಕೊಳ್ಳುವುದು ಒಳ್ಳೆಯ ಕೆಲಸ. ಸಾಮೂಹಿಕ ಮದುವೆಗಳು ಹಣ ಉಳಿತಾಯದ ಜೊತೆಗೆ ಸಮಾಜದಲ್ಲಿ ಸಾಮಾರಸ್ಯದ ಪ್ರತೀಕವಾಗಿವೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿ ಅಭಿಪ್ರಾಯಪಟ್ಟರು.
 ಎಸ್‌ಎನ್ ಕ್ರಿಯಾ ಟ್ರಸ್ಟ್  ಅಧ್ಯಕ್ಷ ಕಾಂಗ್ರೆಸ್ ಮುಖಂಡ ಆಂಜಿನಪ್ಪ ಪುಟ್ಟು  ರವರ ವತಿಯಿಂದ ಸೋಮವಾರ ತಾಲೂಕಿನ ಚಿಕ್ಕದಾಸರಹಳ್ಳಿ  ಗ್ರಾಮದ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಆವರಣದಲ್ಲಿ ಏರ್ಪಡಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದರು.
ಶ್ಲಾಘನೀಯ: ದುಬಾರಿ ಕಾಲದಲ್ಲಿ ಮನೆ ಕಟ್ಟುವುದು, ಮದುವೆ ಮಾಡುವುದು ಬಹಳ ಕಷ್ಟ. ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಮದುವೆ ಸಾಲದ ಬಾಧೆಯಿಂದ ಎಷ್ಟೋ ಕುಟುಂಬಗಳು ವಿಘಟಿತವಾಗುತ್ತಿವೆ. ಇದನ್ನು ಮನಗಂಡು ಎಸ್ ಎನ್ ಕ್ರಿಯಾ ಟ್ರಸ್ಟ್ ನ ಅಂಜಿನಪ್ಪ ಪುಟ್ಟು ರವರು ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ಸಾಮೂಹಿಕ ವಿವಾಹ ಏರ್ಪಡಿಸಿರುವುದು ಶ್ಲಾಘನೀಯವಾಗಿದೆ ಎಂದರು.
ದೇವರ ಸಾನ್ನಿಧ್ಯದಲ್ಲಿ ಗುರುಹಿರಿಯರ, ಮಠಾದೀಶರಿಂದ ಆಶೀರ್ವಾದ ಪಡೆದ ನೀವು ಧನ್ಯರು. ನಿಮ್ಮ ನವದಾಂಪತ್ಯ ಜೀವನ ಸುಖಕರವಾಗಲಿ. ಸಂಸಾರದಲ್ಲಿ ಬರುವ ಕಷ್ಟ ಸುಖಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಜೀವನದಲ್ಲಿ ದುಡುಕು, ಕೋಪ ನಿಮ್ಮ ಬದುಕನ್ನು ಹಾಳುಮಾಡುತ್ತದೆ. ಇದರಿಂದ ಎಚ್ಚರವಿರಬೇಕು. ಅತ್ತೆ ಮಾವಂದಿರನ್ನು ಗೌರವದಿಂದ ಕಾಣಬೇಕು. ಸೊಸೆಯಂದಿರನ್ನು ನಿಮ್ಮ ಮಗಳೆಂದು ಭಾವಿಸಿ ಪರಸ್ಪರರು ಅನ್ಯೋನ್ಯತೆಯಿಂದ ಬದುಕು ಸುಂದರ ಮಾಡಿಕೊಳ್ಳಿ ಎಂದು ನವದಂಪತಿಗಳಿಗೂ ಹಾಗೂ ಪಾಲಕರಿಗೂ ಕಿವಿಮಾತು ಹೇಳಿದರು.
ಮಿತ ಸಂತಾನ: ದೇಶದಲ್ಲಿ ಜನಸಂಖ್ಯೆ ನಾಗಾ ಲೋಟದಲ್ಲಿ ಬೆಳೆಯುತ್ತಿದೆ. ಇದರಿಂದ ಸಾಕಷ್ಟು ಸಮಸ್ಯೆಗಳು ಸೃಷ್ಟಿಯಾಗುತ್ತಿವೆ. ಇದಕ್ಕೆ ಕಡಿವಾಣ ಹಾಕಲು ನವದಂಪತಿಗಳು ಮಿತ ಸಂತಾನಕ್ಕೆ ಆದ್ಯತೆ ನೀಡಬೇಕು. ಇದು ನಿಮ್ಮ ಸುಖ ಸಂಸಾರಕ್ಕೂ ಕಾರಣವಾಗುತ್ತದೆ ಎಂದು ಸಲಹೆ ನೀಡಿದರು.
ಸಾಮೂಹಿಕ ವಿವಾಹ ಮಹೋತ್ಸವದಲ್ಲಿ  40 ಜೋಡಿಗಳು ಕಂಕಣ ಭಾಗ್ಯ ಪಡೆದರು,ಆಂಜಿನಪ್ಪ ಪುಟ್ಟು ರವರ ಕಡೆಯಿಂದ ನವ ಜೋಡಿಗಳಿಗೆ ಬಟ್ಟೆ, ತಾಳಿ, ಕಾಲುಂಗುರ, ಎಲ್ಇಡಿ ಟಿವಿಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಪೀಠಾಧೀಶರಾದ ಮಂಗಳನಂದ  ಸ್ವಾಮೀಜಿ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ, ಬ್ಯಾಟರಾಯ ಶೆಟ್ಟಿ, ತಹಶೀಲ್ದಾರ್ ಬಿಎಸ್ ರಾಜೀವ್, ಎಸ್ ಎನ್ ಕ್ರಿಯಾ ಟ್ರಸ್ಟ್ ಸದಸ್ಯರಾದ ವಿಶ್ವನಾಥ್, ಆನೂರು ದೇವರಾಜ್, ಗುರುರಾಜ್, ರೈತ ಸಂಘದ ತಾಲೂಕ ಅಧ್ಯಕ್ಷರಾದ ತಾದೂರು ಮಂಜುನಾಥ್, ಸೇರಿದಂತೆ ಇತರರು ಹಾಜರಿದ್ದರು

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments