ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾಗಬೇಕು-ಡಾ: ಓ.ನಾಗರಾಜು

0
93

–ಪಾಲಾರ್ ಪತ್ರಿಕೆ –
ತುಮಕೂರು: ವಿದ್ಯಾರ್ಥಿಗಳು ನಿರಂತರ ಅಧ್ಯಯನಶೀಲರಾದಾಗ ಮಾತ್ರ ಜಗತ್ತನ್ನು ಎದುರಿಸಲು ಸಾಧ್ಯ ಎಂದು ಜಿಲ್ಲೆಯ ಖ್ಯಾತ ಸಾಹಿತಿ ಹಾಗೂ ನಾಟಕಕಾರರಾದ ಡಾ:ಓ.ನಾಗರಾಜು ಕರೆ ನೀಡಿದರು.
೭೫ನೇ ಭಾರತ ಸ್ವಾತಂತ್ರ÷್ಯದ ಅಮೃತ ಮಹೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆ, ತುಮಕೂರು ವಿಶ್ವವಿದ್ಯಾನಿಲಯ, ಡಾ:ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಮಧುಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಂಯುಕ್ತಾಶ್ರಯದಲ್ಲಿAದು ಮಧುಗಿರಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ “ಭಾರತ ರತ್ನ ಡಾ: ಬಿ.ಆರ್.ಅಂಬೇಡ್ಕರ್ ಓದು” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳನ್ನು ನಿರಂತರ ಅಧ್ಯಯನಶೀಲರಾನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರವು ಡಾ: ಬಿ. ಆರ್. ಅಂಬೇಡ್ಕರ್ ಓದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಅಂಬೇಡ್ಕರ್, ಗಾಂಧೀಜಿ ಅವರ ಆದರ್ಶ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕು. ಬಹುದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತಕ್ಕೆ ಲಿಖಿತ ಸಂವಿಧಾನ ನೀಡಿದ ಖ್ಯಾತಿ ಅಂಬೇಡ್ಕರ್ ಅವರದ್ದು. ಅಂಬೇಡ್ಕರ್ ಅವರ ಭಾಷಣಗಳು, ಚಿಂತನೆಗಳು, ಬರಹಗಳು ಎಂದೆAದಿಗೂ ಪ್ರಸ್ತುತ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಮೇಲ್ವಿಚಾರಕ ಡಿ.ವಿ.ಸುರೇಶ್ ಕುಮಾರ್ ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, ಸರ್ಕಾರವು ಈ ಕಾರ್ಯಕ್ರಮವನ್ನು ಕಾಲೇಜು ವಿದ್ಯಾರ್ಥಿಗಳಿಗಾಗಿ ರೂಪಿಸಿದ್ದು, ಇದರಡಿ ಡಾ:ಬಿ.ಆರ್. ಅಂಬೇಡ್ಕರ್ ಕುರಿತಂತೆ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಆಶುಭಾಷಣ ಸ್ಪರ್ಧೆ ಮತ್ತು ಕವನ ವಾಚನದಂತಹ ಕಾರ್ಯಕ್ರಮಗಳನ್ನು ಸ್ಪರ್ಧಾತ್ಮಕವಾಗಿ ಏರ್ಪಡಿಸಲಾಗುತ್ತದೆ. ಸ್ಪರ್ಧೆಯಲ್ಲಿ ಆಯ್ಕೆಯಾದ ಐದು ವಿದ್ಯಾರ್ಥಿಗಳಿಗೆ ಪುಸ್ತಕ ಬಹುಮಾನಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ: ಮುನಿಂದ್ರಕುಮಾರ್ ಡಿ.ಎಸ್. ಮಾತನಾಡುತ್ತಾ, ಅಂಬೇಡ್ಕರ್ ಅವರು ತುಳಿತಕ್ಕೆ ಒಳಗಾದ ಎಲ್ಲಾ ಜನಾಂಗಗಳ ಆಶಾಕಿರಣವಾಗಿದ್ದರು. ಅವರ ಚಿಂತನೆಯಿAದ ಹೊರಹೊಮ್ಮಿದ ಮೀಸಲಾತಿಯಿಂದ ಸಮಾಜದಲ್ಲಿ ಸಾಮಾಜಿಕ, ಶೈಕ್ಷಣಿಕ ನ್ಯಾಯಗಳು ಎಲ್ಲರಿಗೂ ಸಮಾನವಾಗಿ ದೊರೆಯಲು ಸಾಧ್ಯವಾಯಿತು. ಇಂದು ಏರ್ಪಡಿಸಿರುವ ಈ ಮಾದರಿಯ ಸ್ಪರ್ಧೆಗಳು ಮಕ್ಕಳು ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿವೆಯೆಂದು ತಿಳಿಸಿದರು.
ತುಮಕೂರು ವಿಶ್ವವಿದ್ಯಾಲಯದ ಸಂಶೋಧನಾ ಸಹಾಯಕ ಕೆ.ಎನ್.ಲಕ್ಷೀರಂಗಯ್ಯ ಮಾತನಾಡಿ, ಅಂಬೇಡ್ಕರ್ ಅವರ ಚಿಂತನೆಗಳನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿಗಳು ನಿರಂತರ ಓದುವುದು ಹಾಗೂ ಜೀವನದಲ್ಲಿ ಅಳವಡಿಸಿಕೊಳ್ಳುವ ಮುಖೇನ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾದ್ಯಾಪಕ ಪ್ರೊ: ಶಂಕರ್‌ಲಿAಗಯ್ಯ ನಡೆಸಿಕೊಟ್ಟರು. ಸಹಾಯಕ ಪ್ರಾದ್ಯಾಪಕ ನಾಗರಾಜು ವಂದಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕöÈತಿ ಇಲಾಖೆಯ ಸಿಬ್ಬಂದಿ ರಾಜೇಶ್ ಬಿ.ಕೆ, ಕಾಲೇಜಿನ ಶಿಕ್ಷಕ ವರ್ಗ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪುಸ್ತಕಗಳನ್ನು ಬಹುಮಾನದ ರೂಪದಲ್ಲಿ ನೀಡಲಾಯಿತು.

LEAVE A REPLY

Please enter your comment!
Please enter your name here