Sunday, April 28, 2024
spot_img
HomeMandyaಆಕ್ಸಿಜನ್ ಕಾನ್ಸನ್ಟ್ರೇಟರ್ ಹಾಗೂ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿದ ಮಂಡ್ಯ ಸಂಸದೆ

ಆಕ್ಸಿಜನ್ ಕಾನ್ಸನ್ಟ್ರೇಟರ್ ಹಾಗೂ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿದ ಮಂಡ್ಯ ಸಂಸದೆ

ಮಂಡ್ಯ: ಇಂದು ಮಂಡ್ಯ ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ ರವರು ಆಕ್ಸಿಜನ್ ಕಾನ್ಸನ್ಟ್ರೇಟರ್‍ಗಳನ್ನು ಹಾಗೂ ಯಂತ್ರಚಾಲಿತ ತ್ರಿಚಕ್ರ ವಾಹನಗಳು ಹಾಗೂ ಟ್ಯಾಬ್‍ಗಳನ್ನು ವಿತರಿಸಿದರು.

ಇಂದು ಮಂಡ್ಯ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಕೋವಿಡ್-19 ರೂಪಾಂತರಿಯ ಮುಂಜಾಗೃತ ಕ್ರಮವಾಗಿ ಜಿಲ್ಲೆಯ ಹಲವು ಆಸ್ಪತ್ರೆಗಳು ಹಾಗೂ ವೃದ್ಧಾಶ್ರಮಗಳಿಗೆ ಆಕ್ಸಿಜನ್ ಕಾನ್ಸನ್ಟ್ರೇಟರ್‍ಗಳನ್ನು ವಿತರಿಸಿದರು.

 ಇದೇ ಸಂದರ್ಭದಲ್ಲಿ ಸಂಸದರ ಪ್ರಾದೇಶಿಕ ಅಭಿವೃದ್ಧಿ ಅನುದಾನ 2019-20ರÀಡಿ ಜಿಲ್ಲೆಯ 10 ವಿಕಲಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನಗಳನ್ನು ವಿತರಿಸಿದರು ಹಾಗೂ ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಮಂಡ್ಯ, ಮದ್ದೂರು, ಮಳವಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ ಹಾಗೂ ಕೆ.ಆರ್ ಪೇಟೆ ತಾಲ್ಲೂಕುಗಳ ಸರ್ಕಾರಿ ಶಾಲಾ ಮಕ್ಕಳಿಗೆ ಒಂದೇ ಸೂರಿನಡಿಯಲ್ಲಿ ಟ್ಯಾಬ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments