Friday, March 29, 2024
spot_img
HomeTumkurತುಮಕೂರು ಜಿಲ್ಲೆಯಾದ್ಯಂತ್ತ ಶ್ರದ್ಧಾ ಭಕ್ತಿಯ ಮಹಾಶಿವರಾತ್ರಿ ಆಚರಣೆ

ತುಮಕೂರು ಜಿಲ್ಲೆಯಾದ್ಯಂತ್ತ ಶ್ರದ್ಧಾ ಭಕ್ತಿಯ ಮಹಾಶಿವರಾತ್ರಿ ಆಚರಣೆ

ಪಾಲಾರ್ ಪತ್ರಿಕೆ | Palar Pathrike

ತುಮಕೂರು: ಶಿವನನ್ನು ಆರಾಧಿಸುವ ಹಾಗೂ ಉಪವಾಸ ವ್ರತದ ಪ್ರಮುಖ ಹಬ್ಬವಾದ ಮಹಾಶಿವರಾತ್ರಿಯನ್ನು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅತ್ಯಂತ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಜಿಲ್ಲೆಯಾದ್ಯಂತ ಶಿವನ ದೇವಾಲಯಗಳು ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಇಂದು ಮುಂಜಾನೆಯಿAದಲೇ ಅಭಿಷೇಕ, ವಿವಿಧ ಧಾರ್ಮಿಕ ಪೂಜೆಗಳೊಂದಿಗೆ ಶಿವನಾಮ ಸ್ಮರಣೆ ಮೊಳಗಿದವು.
ಮುಂಜಾನೆಯಿAದಲೇ ವಿವಿಧ ದೇವಾಲಯಗಳಲ್ಲಿ ಶಿವರಾತ್ರಿ ಹಬ್ಬದ ವಿಶೇಷವಾಗಿ ಧಾರ್ಮಿಕ ಪೂಜಾ ವಿಧಿ ವಿಧಾನಗಳು ನೆರವೇರಿದವು.
ನಗರದ ಬಿ.ಹೆಚ್. ರಸ್ತೆಯ ಭದ್ರಮ್ಮ ವೃತ್ತದಲ್ಲಿರುವ ಸೋಮೇಶ್ವರ ದೇವಾಲಯ, ಹೊರಪೇಟೆಯಲ್ಲಿರುವ ನೀಲಕಂಠೇಶ್ವರ ಸ್ವಾಮಿ ದೇವಾಲಯ, ಕುಣಿಗಲ್ ರಸ್ತೆಯಲ್ಲಿರುವ ಮಾರುತಿ ಬನಶಂಕರಿ ಮತ್ತು ಬಸವಣ್ಣ ದೇವಾಲಯ, ಟಿಜಿಎಂಸಿ ಬ್ಯಾಂಕ್ ಆವರಣದ ಲಕ್ಷಿ÷್ಮದೇವಾಲಯ, ಹೊರಪೇಟೆಯ ಕಾಶಿ ವಿಶ್ವನಾಥ ದೇವಾಲಯ, ಸಿದ್ದರಾಮೇಶ್ವರ ಬಡಾವಣೆಯ ಈಶ್ವರ ದೇವಾಲಯ, ಸರಸ್ವತಿಪುರಂ ಶಿವನ ದೇವಾಲಯ ಸೇರಿದಂತೆ ವಿವಿಧ ದೇವಾಲಯಗಳಿಗೆ ನಸುಕಿನಿಂದಲೇ ಸುಮಂಗಲಿಯರು, ಮಕ್ಕಳು, ವೃದ್ಧರು ಸೇರಿದಂತೆ ಕುಟುಂಬ ಸಮೇತರಾಗಿ ತೆರಳಿ ಶಿವನ ದರ್ಶನ ಪಡೆದು ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ನಗರದ ಹೊರಪೇಟೆಯ ನೀಲಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಅಂಗವಾಗಿ ಮುಂಜಾನೆಯಿAದ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ ನೆರವೇರಿತು. ಬಿ.ಹೆಚ್. ರಸ್ತೆಯ ಟಿಜಿಎಂಸಿ ಬ್ಯಾಂಕ್ ಆವರಣದಲ್ಲಿ ಭಕ್ತರಿಗಾಗಿ ವಿಶೇಷವಾಗಿ ಶಿವನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಭಕ್ತಾದಿಗಳು ಬೆಳಿಗ್ಗೆಯಿಂದೇ ಸರದಿ ಸಾಲಿನಲ್ಲಿ ತೆರಳಿ ಶಿವನ ದರ್ಶನ ಪಡೆದಿದ್ದು ವಿಶೇಷವಾಗಿತ್ತು.
ಭದ್ರಮ್ಮ ವೃತ್ತದಲ್ಲಿರುವ ಸೋಮೇಶ್ವರ ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ಭಕ್ತರ ದಂಡು ಕಂಡು ಬಂದಿದ್ದು, ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತರು ಸರದಿಯ ಸಾಲಿನಲ್ಲಿ ನಿಂತು ಶ್ರೀಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು.
ಕ್ಯಾತ್ಸಂದ್ರದ ಹರಿಹರ ಕ್ಷೇತ್ರವೆಂದೇ ಪ್ರಸಿದ್ಧವಾದ ಶ್ರೀ ಚಂದ್ರಮೌಳೀಶ್ವರಸ್ವಾಮಿ ದೇವಾಲಯದಲ್ಲಿ ನಾಲ್ಕು ಯಾಮದ ಪೂಜೆ, ವಿಶೇಷ ಅಲಂಕಾರ ಏರ್ಪಡಿಸಲಾಗಿತ್ತು. ಮುಂಜಾನೆಯಿAದಲೇ ಚಂದ್ರಮೌಳೀಶ್ವರ ಸ್ವಾಮಿಗೆ ಏಕವಾರ ರುದ್ರಾಭಿಷೇಕ, ಶ್ರೀ ಕೇದಾರೇಶ್ವರ ಸ್ವಾಮಿಗೆ ಏಕವಾರ ರುದ್ರಾಭಿಷೇಕ ನೆರವೇರಿಸಲಾಯಿತು.
ನಗರದ ಬಿ.ಹೆಚ್. ರಸ್ತೆಯಲ್ಲಿರುವ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ನೂತನವಾಗಿ ಪ್ರತಿಷ್ಠಾಪಿಸಲ್ಪಡುತ್ತಿರುವ ಸ್ಫಟಿಕಲಿಂಗಕ್ಕೆ ವಿಶೇಷ ಪೂಜಾದಿಗಳು ನೆರವೇರಿದ್ದು ಈ ಬಾರಿಯ ವೈಶಿಷ್ಯವಾಗಿದೆ.
ಇಂದು ಸಂಜೆ 6 ಗಂಟೆಯಿAದ ನಾಲ್ಕು ಯಾಮದ ಪೂಜಾದಿಗಳು ಪ್ರಾರಂಭಗೊAಡು ನಾಳೆ ಬೆಳಿಗ್ಗೆ 6 ಗಂಟೆಯವರೆಗೆ ನಿರಂತರವಾಗಿ ನೆರವೇರಲಿವೆ.
ಆರು ಇಂಚು ಅಗಲ ಮತ್ತು ಆರು ಇಂಚು ಎತ್ತರದ ಈ ಸ್ಫಟಿಕಲಿಂಗವನ್ನು ರಾಜಾಸ್ತಾನದ ಜೈಪುರದಲ್ಲಿ ಶಾಸ್ತೊçÃಕ್ತವಾಗಿ ಸಿದ್ಧಪಡಿಸಲಾಗಿದೆ. ಶಿವನ ಎಂಟು ಸ್ವರೂಪಗಳು, ಏಕಾದಶ ರುದ್ರರು, ಬ್ರಹ್ಮ, ವಿಷ್ಣು, ಮಹೇಶ್ವರ ಹಾಗೂ ಮಹಾಲಕ್ಷಿ÷್ಮÃ, ಮಹಾಸರಸ್ವತಿ ಹಾಗೂ ಮಹಾಕಾಳಿಯ ಸ್ವರೂಪಗಳೂ ಈ ಸ್ಫಟಿಕಲಿಂಗದಲ್ಲಿ ಅಡಕಗೊಂಡಿವೆ. ಬೆಂಗಳೂರಿನ ಅಂಬಳೆರಾಯರ ಮನೆತನದ ಉದ್ಯಮಿ ಲಕ್ಷಿ÷್ಮÃಪ್ರಸನ್ನ ಅವರು ಸ್ಫಟಿಕಲಿಂಗವನ್ನು ತುಮಕೂರಿನ ಶಂಕರಮಠಕ್ಕೆ ಕೊಡುಗೆಯಾಗಿ ನೀಡಿದ್ದಾರೆ.
ಮುಂಜಾನೆಯಿAದಲೇ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲ ದೇವಾಲಯಗಳಲ್ಲಿ ಭಕ್ತರ ದಂಡು ಕಂಡು ಬರುತ್ತಿದ್ದು, ಮಹಾಶಿವರಾತ್ರಿ ಪ್ರಯುಕ್ತ ಭಕ್ತಾದಿಗಳಿಂದ ಶಿವನಾಮ ಸ್ಮರಣೆ, ಭಜನೆಗಳು ನಿರಂತರವಾಗಿ ಮೊಳಗಿದವು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments