Tuesday, April 23, 2024
spot_img
HomeTumkurಡಿ.5 ರಿಂದ ಜೆಇ ಲಸಿಕಾ ಅಭಿಯಾನ: ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ

ಡಿ.5 ರಿಂದ ಜೆಇ ಲಸಿಕಾ ಅಭಿಯಾನ: ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ


ಪಾಲಾರ್ ಪತ್ರಿಕೆ | Palar Patrike

.

ತುಮಕೂರು : ಜಿಲ್ಲೆಯಲ್ಲಿ ಡಿಸೆಂಬರ್ ೫ ರಿಂದ ಹಮ್ಮಿಕೊಂಡಿರುವ ಸರ್ಕಾರಿ/ಖಾಸಗಿ ಶಾಲೆಯ ೧ ರಿಂದ ೧೫ ವರ್ಷ ವಯೋಮಾನದ ಮಕ್ಕಳಿಗೆ ಜೆ.ಇ.(Japanese Encephalitis) ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮದ ಯಶಸ್ವಿಗಾಗಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೆಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಮೊದಲ ಬಾರಿಗೆ ಜೆ.ಇ. ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗುತ್ತಿರುವುದರಿಂದ ಯಾವುದೇ ಗೊಂದಲವಾಗದAತೆ ೧ ರಿಂದ ೧೫ ವರ್ಷದೊಳಗಿನ ಶಾಲಾ ಮಕ್ಕಳಿಗೆ ಲಸಿಕೆ ನೀಡಬೇಕು. ಲಸಿಕೆಯಿಂದ ಯಾವ ಮಗುವೂ ತಪ್ಪಿ ಹೋಗಬಾರದು. ಶಾಲೆ ಬಿಟ್ಟ ಮಕ್ಕಳನ್ನೂ ಸಹ ಪತ್ತೆ ಹಚ್ಚಿ ಲಸಿಕೆ ನೀಡಬೇಕೆಂದು ನಿರ್ದೇಶನ ನೀಡಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವದ ಲಸಿಕಾ ಅಭಿಯಾನ ಕಾರ್ಯಕ್ರಮ ಇದಾಗಿದ್ದು, ಅಭಿಯಾನ ಕುರಿತು ನಗರ ಪ್ರದೇಶ ಸೇರಿದಂತೆ ಗ್ರಾಮ ಮಟ್ಟದಲ್ಲಿ ಅಗತ್ಯ ಪ್ರಚಾರ ಕೈಗೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡುವ ಸಂಬAಧ ಸರ್ಕಾರಿ/ಖಾಸಗಿ ಶಾಲಾ ಮುಖ್ಯಸ್ಥರ ಸಭೆ ನಡೆಸಿ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಮನವರಿಕೆ ಮಾಡಬೇಕು. ಶಾಲಾ ಮುಖ್ಯಸ್ಥರು ಮಕ್ಕಳ ಪೋಷಕರ ಸಭೆ ಕರೆದು ತಪ್ಪದೇ ಮಕ್ಕಳಿಗೆ ಲಸಿಕೆ ಹಾಕಿಸುವ ಬಗ್ಗೆ ಅರಿವು ಮೂಡಿಸಬೇಕೆಂದರುಲ್ಲದೆ ಡಿಸೆಂಬರ್ ೧ರಂದು ವಿಶ್ವ ಏಡ್ಸ್ ನಿಯಂತ್ರಣ ದಿನಾಚರಣೆ ಪ್ರಯುಕ್ತ ತಾಲ್ಲೂಕು ಮಟ್ಟದಲ್ಲಿ ಜಾಥಾ ಸೇರಿದಂತೆ ವಿವಿಧ ಅರಿವು ಕಾರ್ಯಕ್ರಮವನ್ನು ಏರ್ಪಡಿಸಬೇಕೆಂದು ಸೂಚನೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments