Tuesday, May 7, 2024
spot_img
HomeTumkurಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರವಹಿಸಿ: ವೈ.ಎಸ್.ಪಾಟೀಲ್

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಬಿಟ್ಟು ಹೋಗದಂತೆ ಎಚ್ಚರವಹಿಸಿ: ವೈ.ಎಸ್.ಪಾಟೀಲ್

ಪಾಲಾರ್ ಪತ್ರಿಕೆ | Palar Patrike

ತುಮಕೂರು: ಮತದಾರರ ಪಟ್ಟಿಯ ಪರಿಷ್ಕರಣೆಗೆ ಅವಕಾಶ ನೀಡಲಾಗಿದ್ದು, ಮತದಾರರು ತಪ್ಪದೇ ತಮ್ಮ ಹೆಸರು ಪರಿಶೀಲನೆ ಮಾಡಿಕೊಳ್ಳಬೇಕು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಯಾವುದೇ ಮತದಾರರ ಹೆಸರು ಬಿಟ್ಟು ಹೋಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿ, ಜಿಲ್ಲೆಯ ಇಆರ್‌ಒ, ಇಒ, ಎಇಆರ್‌ಒ, ಹಾಗೂ ಇತರ ಅಧಿಕಾರಿಗಳೊಂದಿಗೆ ಮತದಾರರ ಪಟ್ಟಿ ಪರಿಷ್ಕರಣೆ-2023 , ಮನೆ ಮನೆ ಭೇಟಿ ಹಾಗೂ ಇತರೆ ಚುನಾವಣೆ ವಿಷಯಗಳ ಚರ್ಚಿಸಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ/ ನಿರ್ದೇಶನಗಳನ್ನು ಅನುಸರಿಸಿ ಮತದಾರರ ಪಟ್ಟಿಯನ್ನು ತಯಾರಿಸಲಾಗುತ್ತದೆ, ೧೮ ವರ್ಷ ತುಂಬಿದ ಪ್ರತಿಯೊಬ್ಬರೂ ಹೆಸರನ್ನು ನೋಂದಾಯಿಸಿಕೊಳ್ಳಬೇಕು, ಸುತ್ತಮುತ್ತಲಿನ, ಅಕ್ಕಪಕ್ಕದವರಲ್ಲೂ ಈ ಜಾಗೃತಿ ಮೂಡಿಸಬೇಕು, ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು. ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದಲ್ಲಿ ಮತ್ತೆ ಸೇರ್ಪಡೆ ಮಾಡಿಸಿಕೊಳ್ಳಬಹುದು. ಮೊಬೈಲ್ ಸಂಖ್ಯೆ ಬದಲಾವಣೆ, ವಿಳಾಸ ಬದಲಾವಣೆ, ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಕುರಿತು ನಿಗದಿತ ಅರ್ಜಿ ಸಲ್ಲಿಸಬೇಕು’ ಎಂದರು. ಜಿಲ್ಲೆಯಲ್ಲಿ ೨೧೬೨೬೧೩ ಮತದಾರರಿದ್ದಾರೆ, ಅವರಲ್ಲಿ ೧೦೮೨೭೫೨ ಪುರುಷ, ೧೦೭೯೭೬೯ ಮಹಿಳಾ ಮತದಾರರಿದ್ದಾರೆ, ೦೧ ಜನವರಿ ೨೦೨೩ಕ್ಕೆ ಅನ್ವಯವಾಗುವಂತೆ ಅರ್ಹ ಮತದಾರರನ್ನು ಸೇರ್ಪಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಅರ್ಹ ಹೊಸ ಮತದಾರರು ನಿಗದಿತ ಅರ್ಜಿ ನಮೂನೆ ಸಲ್ಲಿಸಿ ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರಿಸಬೇಕು. ಚುನಾವಣಾ ಆಯೋಗ, ಜಿಲ್ಲಾಡಳಿತ ನೀಡಿರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು. ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸಲು ದೋಷರಹಿತ ಮತದಾರ ಪಟ್ಟಿ ಮೂಲ ಆಧಾರವಾಗಿದೆ. ಇದನ್ನು ಅರಿತು ಕಾರ್ಯೋನ್ಮುಖರಾಗಿ ಎಂದು ಕರೆ ನೀಡಿದರು. ಮತದಾರರ ಪಟ್ಟಿಗೆ ಮತದಾರರನ ಹೆಸರು ನೋಂದಾಯಿಸುವ ಬಗ್ಗೆ ಯಾವುದಾದರೂ ತೊಂದರೆ, ಗೊಂದಲಗಳಿದ್ದರೆ ಎಇಆರ್‌ಒ ಕಚೇರಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳುವಂತೆ ತಿಳಿಸಿದರು.
ಆಧಾರ್ ಜೋಡಣೆ: ಜಿಲ್ಲೆಯ ಒಟ್ಟು ಮತದಾರರಲ್ಲಿ ೧೯೨೨೬೩೮ ಮತದಾರರು ಈಗಾಗಲೇ ಎಪಿಕ್ ಕಾರ್ಡ್ ಜತೆಗೆ ಆಧಾರ್ ನೋಂದಣಿ ಮಾಡಿಸಿಕೊಂಡಿದ್ದಾರೆ. ಎಪಿಕ್ ಕಾರ್ಡಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಮತದಾರರಿಗೆ ಕಳುಹಿಸಲಾಗುತ್ತಿದೆ. ಜಿಲ್ಲೆಯಲ್ಲಿ ಎಪಿಕ್‌ಗೆ ಆಧಾರ್ ಜೋಡಣೆ ಪ್ರಮಾಣವು ಶೇ ೮೮.೯೦ ಆಗಿದೆ..

ಮನೆ ಮನೆ ಸಮೀಕ್ಷೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈಗಾಗಲೇ ನೇಮಕಗೊಂಡ ಮತಗಟ್ಟೆ ಮಟ್ಟದ ಅಧಿಕಾರಿಗಳು ೦೯ ನವೆಂಬರ 2022 ರಿಂದ ೦೮ ಡಿಸೆಂಬರ್ ೨೦೨೨ರ ವರೆಗೆ ಮನೆ ಮನೆ ಸಮೀಕ್ಷೆ ನಡೆಸಲಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿದ ಸಮಯದಲ್ಲಿ ಜಿಲ್ಲೆಯ ಎಲ್ಲಾ ಮತದಾರರು ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ನಮೂನೆ-೬ರ ಮೂಲಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ನಮೂನೆ-೭: ಪಟ್ಟಿಯಿಂದ ಹೆಸರನ್ನು ಕಿತ್ತುಹಾಕಲು ಅಥವಾ ಹೆಸರುಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲು, ಮತ್ತು ನಮೂನೆ-೮ರ ಮೂಲಕ ಮತದಾರರ ಹೆಸರು ತಿದ್ದುಪಡಿ ಮಾಡುವುದು.

ಜಿಲ್ಲೆಯ ಎಲ್ಲಾ ವಿಧಾನಸಭಾ/ತಾಲೂಕು ವ್ಯಾಪ್ತಿಯ ಎಲ್ಲಾ ಸಾರ್ವಜನಿಕರು ಜಾಲತಾಣ http://electoralsearch.in ಟಿ ಮೂಲಕ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ. ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲವಾದಲ್ಲಿ ಅಥವಾ ಕರಡು ಮತದಾರರ ಪಟ್ಟಿಯಲ್ಲಿ ತಿದ್ದುಪಡಿಗಳೇನಾದರೂ ಇದ್ದಲ್ಲಿ ೧೮ ವರ್ಷ ಮೇಲ್ಪಟ್ಟ ಅರ್ಹ ನಾಗರಿಕರೆಲ್ಲರೂ ನ್ಯಾಷನಲ್ ವೋಟರ್ಸ್ ಸರ್ವೀಸ್ ಪೋರ್ಟಲ್/ವೋಟರ್ ಪೋರ್ಟಲ್ ಅಥವಾ ವೋಟರ್ ಹೆಲ್ಪ್ಲೈನ್ ಆ್ಯಪ್‌ನಲ್ಲಿ ನೊಂದಾಯಿಸಿದ ನಂತರ ನಮೂನೆ-೬ನ್ನು ಭರ್ತಿ ಮಾಡಿ ಜಾಲತಾಣ https://www/nvsp.in / https://voterportal.eci.gov.in / GoogleAppStore : https://play.google.com/store/apps/details?id=com.eci.citizen&hl=en_IN  Apple App Store : https://apps.apple.com/us/app/voter-helpline/id1456535004 ಗಳ ಮೂಲಕ ನೊಂದಾವಣಿ ಮಾಡಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ಮತದಾರರ ನೊಂದಣಾಧಿಕಾರಿ/ಸಹಾಯಕ ಮತದಾರರ ನೊಂದಣಾಧಿಕಾರಿ ಕಚೇರಿ ಅಥವಾ ಉಚಿತ ಸಹಾಯವಾಣಿ ಸಂಖ್ಯೆ ೧೯೫೦ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿಗಳಾದ ರಿಷಿಆನಂದ್, ಅಜಯ್, ಚುನಾವಣೆ ಶಿರೇಸ್ತೆದಾರ ಎನ್ ನರಸಿಂಹರಾಜು, ತಹಸೀಲ್ದಾರ್‌ಗಳು, ಇಆರ್‌ಒ, ಇಒ, ಎಇಆರ್‌ಒ, ಚುನಾವಣೆಯ ಶಾಖೆಯ ಎಲ್ಲಾ ಅಧಿಕಾರಿ,ಸಿಬ್ಬಂದಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments