Friday, May 3, 2024
spot_img
HomeTumkurಸಧೃಡ ದೇಹ ಹಾಗೂ ಮನಸ್ಸಿಗಾಗಿ ಪ್ರತಿಯೋಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು : ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್

ಸಧೃಡ ದೇಹ ಹಾಗೂ ಮನಸ್ಸಿಗಾಗಿ ಪ್ರತಿಯೋಬ್ಬರೂ ಕ್ರೀಡೆಗಳಲ್ಲಿ ಭಾಗವಹಿಸಬೇಕು : ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್

ಪಾಲಾರ್ ಪತ್ರಿಕೆ | Palar Patrike

ತುಮಕೂರು: ಜೀವನದ ಸೋಲು ಗೆಲವುಗಳ ದಾಟಿ ಯಶಸ್ಸು ಸಾಧಿಸುವ ಪ್ರೇರಣೆಯನ್ನು ಕ್ರೀಡೆಗಳು ಕಲಿಸುತ್ತವೆ, ಕ್ರೀಡೆಗಳಲ್ಲಿ ಭಾಗವಹಿಸುದರ ಮೂಲಕ ಪ್ರತಿಯೋಬ್ಬರೂ ತಮ್ಮ ದೇಹ ಹಾಗೂ ಮನಸ್ಸನ್ನು ಸಧೃಡಗೊಳಿಸಬಹುದು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ್ ಹೇಳಿದರು.
ಇಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಕ್ರೀಡಾ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ, ನಡೆದ ‘ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ-2022 ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಪ್ರಥಮವಾಗಿ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಇಂದು ಅಯೋಜಿಸಲಾಗಿದೆ, ರಾಜ್ಯದ ದೇಸೀ, ಜಾನಪದ ಮತ್ತು ಸ್ಥಳೀಯ ಕ್ರೀಡೆಗಳಾದ ಕಬ್ಬಡಿ, ಕೊಕ್ಕೊ, ಎತ್ತಿನ ಬಂಡಿ, ಕುಸ್ತಿಯಂತಹ ಕ್ರೀಡೆಗಳಿಗೆ ಉತ್ತೇಜನ ನೀಡಲು ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಗ್ರಾಮೀಣ ಕ್ರೀಡಾಕೂಟ ಆಯೋಜನೆ ಮಾಡಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಪಾಲ್ಗೊಂಡು, ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡುವ ಮೂಲಕ ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರುವ ಕೆಲಸ ಮಾಡಿ ಎಂದು ಕರೆ ನೀಡಿದರು..

ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿಧ್ಯಾಕುಮಾರಿ ಮಾತನಾಡಿ ಕ್ರೀಡಾಪಟುಗಳಿಗೆ ಶುಭಕೋರಿದರು.
ಗ್ರಾಮೀಣ ಶೈಲಿಯ ಕ್ರೀಡೆಗಳಲ್ಲಿ ಭಾಗಿಯಾದ ಯುವಕ ಯುವತಿಯರು ಕ್ರೀಡಾಸ್ಫೂರ್ತಿ ಮೆರೆದರು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಜಿಲ್ಲಾ ಪಂಚಾಯತ್‌ನ ಮುಖ್ಯಯೋಜನಾಧಿಕಾರಿ ಸಣ್ಣಮಸಿಯಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ರೇಷ್ಮೇ ಇಲಾಖೆಯ ಉಪನಿರ್ದೇಶಕರಾದ ರಾಮಕೃಷ್ಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾಧ ಕೆ.ನಾಗರಾಜ, ವಾಲಿಬಾಲ್ ತರಬೇತುದಾರ ಪ್ರದೀಪ, ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು, ಕ್ರೀಡಾ ಸಂಘಸAಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಯೋಗಿ
9964525155

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments