Wednesday, May 8, 2024
spot_img
HomeTumkurಎಸ್.ಎಸ್.ಎಲ್.ಸಿ. ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ” ಕಾರ್ಯಗಾರ

ಎಸ್.ಎಸ್.ಎಲ್.ಸಿ. ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ” ಕಾರ್ಯಗಾರ


ಪಾಲಾರ್ ಪತ್ರಿಕೆ | Palar Patrike

ತುಮಕೂರು : ಜಿಲ್ಲಾ ಬಾಲಭವನ ಸಮಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತುಮಕೂರು ಸಾರ್ವಜನಿಕ ಶಿಕ್ಷಣ ಇಲಾಖೆ(ದಕ್ಷಿಣ ಶೈಕ್ಷಣಿಕ ಜಿಲ್ಲೆ) ಇವರ ಸಹಯೋಗದಲ್ಲಿ ಸೋಮವಾರ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ “ಎಸ್.ಎಸ್.ಎಲ್.ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ” ಕಾರ್ಯಗಾರ ಏರ್ಪಡಿಸಲಾಗಿತ್ತು.
ಸಾರ್ವಜನಿಕ ಶಿಕ್ಷಣ ಇಲಾಖೆ ದಕ್ಷಿಣ ಶೈಕ್ಷಣಿಕ ಜಿಲ್ಲೆ ಉಪನಿರ್ದೇಶಕ ನಂಜಯ್ಯ ಅವರು ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಾ, ಶಿಕ್ಷಣಕ್ಕೆ ಸರ್ಕಾರ ಹೆಚ್ಚು ಒತ್ತು ನೀಡಿ ಎಲ್ಲಾ ಶಾಲೆಗಳಿಗೂ ಮೂಲಭೂತ ಸೌಲಭ್ಯಗಳಾದ ಕಟ್ಟಡ ವ್ಯವಸ್ಥೆಯನ್ನು ಮಾಡಿಕೊಡುವುದರ ಮೂಲಕ ಶಿಕ್ಷಣಕ್ಕೆ ತನ್ನದೇ ಆದ ಪ್ರಾಮುಖ್ಯತೆ ನೀಡಿ ಕಟ್ಟಡ ವ್ಯವಸ್ಥೆ ಮಾಡಿಕೊಡಲಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಾಲಭವನ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ ಎಂಬ ಒಂದು ದಿನದ ಕಾರ್ಯಗಾರವನ್ನು ಆಯೋಜಿಸಿದ್ದು, ಸದರಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳು ನೀಡುವ ಸಲಹೆ ಸೂಚನೆಗಳನ್ನು ಪಾಲಿಸುವ ಮೂಲಕ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವಂತೆ ಕಿವಿಮಾತನ್ನು ಹೇಳಿದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಣ್ಣಮಸಿಯಪ್ಪ, ಮಕ್ಕಳು ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವುದಕ್ಕೆ ಇಂತಹ ಕಾರ್ಯಗಾರಗಳು ಬಹುಮುಖ್ಯ ಪಾತ್ರ ವಹಿಸುತ್ತದೆ. À ಮಕ್ಕಳು ಸದರಿ ಕಾರ್ಯಗಾರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ತಮ್ಮ ಶೈಕ್ಷಣಿಕ ಜೀವನದ ಅನುಭವವನ್ನು ಉದಾಹರಣೆಯಾಗಿ ನೀಡುವುದರ ಮೂಲಕ ಸಂಪನ್ಮೂಲ ವ್ಯಕ್ತಿಗಳು ನೀಡುವ ಮಾರ್ಗದರ್ಶನ ಬಳಸಿಕೊಂಡು ಕಾರ್ಯಗಾರದ ಉದ್ದೇಶವನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಮನವಿ ಮಾಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ಮಾತನಾಡುತ್ತಾ, ಮಕ್ಕಳ ಶೈಕ್ಷಣಿಕ ಜೀವನದಲ್ಲಿ ಎಸ್.ಎಸ್.ಎಲ್.ಸಿ ಒಂದು ಮೈಲಿಗಲ್ಲು. ಆದ್ದರಿಂದ ಎಸ್.ಎಸ್.ಎಲ್.ಸಿ.ಯಲ್ಲಿ ಪಡೆಯುವ ಯಶಸ್ಸಿನ ಆಧಾರದ ಮೇಲೆ ತಮ್ಮ ಮುಂದಿನ ಜೀವನ ನಿರ್ಧಾರವಾಗುತ್ತದೆ. ಈ ದಿನ ಕಾರ್ಯಗಾರದ ಪ್ರಯೋಜನ ಪಡೆದು ಎಲ್ಲರೂ ಯಶಸ್ಸು ಸಾಧಿಸಿ ತಮ್ಮ ಜೀವನದ ಭದ್ರ ಬುನಾದಿ ಹಾಕಿಕೊಳ್ಳುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಶಿವಕುಮಾರಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಬಾಲಭವನವು ಮಕ್ಕಳ ಶೈಕ್ಷಣಿಕ ಮತ್ತು ಸರ್ವತೋಮುಖ ಬೆಳವಣಿಗೆಯ ದೃಷ್ಠಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಅದರ ಅಂಗವಾಗಿ ಎಸ್.ಎಸ್.ಎಲ್.ಸಿ ಮಕ್ಕಳೇ ಪರೀಕ್ಷೆಗೆ ಸಿದ್ಧರಾಗಿ ಎಂಬ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ವರ್ಷ ಪೂರ್ತಿ ಕಲಿತ ವಿಷಯವನ್ನು ಮೂರು ಗಂಟೆಗಳ ಪರೀಕ್ಷೆಯ ಅವಧಿಯಲ್ಲಿ ಬರವಣಿಗೆಯ ಮೂಲಕ ಅಭಿವ್ಯಕ್ತಗೊಳಿಸಬೇಕಾಗಿರುತ್ತದೆ. ಆದ್ದರಿಂದ ಎಲ್ಲಾ ಮಕ್ಕಳು ಪರೀಕ್ಷೆಯಲ್ಲಿ ಚೆನ್ನಾಗಿ ಬರೆದು ಯಶಸ್ಸು ಸಾಧಿಸುವಂತೆ ತಿಳಿಸಿದರು. ರಾಜ್ಯ ಮಟ್ಟದಲ್ಲಿ ತುಮಕೂರು ಜಿಲ್ಲೆ ಮೊದಲ ಸ್ಥಾನದಲ್ಲಿ ಬರುವಂತೆ ಎಲ್ಲಾ ಶಿಕ್ಷಕ ವೃಂದದವರು ಕೈ ಜೋಡಿಸುವಂತೆ ಮನವಿ ಮಾಡಿದರು.
ಕಾರ್ಯಗಾರದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಮಾದವರೆಡ್ಡಿ, ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ವಿವಿಧ ಶಾಲೆಗಳ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು. ಜಿಲ್ಲಾ ಬಾಲಭವನ ಸಮಿತಿಯ ಕಾರ್ಯಕ್ರಮ ಸಂಯೋಜಕಿ ಮಮತ.ಪಿ ನಿರೂಪಿಸಿ, ವಂದನಾರ್ಪಣೆ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments