Saturday, April 27, 2024
spot_img
HomeTumkurಮಕ್ಕಳಲ್ಲಿ ಮಾತೃಭಾಷೆ ಮಹತ್ವದ ಬಗ್ಗೆ ಅರಿವು ಮೂಡಿಸಲು ಕರೆ

ಮಕ್ಕಳಲ್ಲಿ ಮಾತೃಭಾಷೆ ಮಹತ್ವದ ಬಗ್ಗೆ ಅರಿವು ಮೂಡಿಸಲು ಕರೆ

ಪಾಲಾರ್ ಪತ್ರಿಕೆ | Palar Patrike

ತುಮಕೂರು : ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಮಾತೃಭಾಷೆಯ ಮಹತ್ವದ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾ ಮಕ್ಕಳ ಕಲ್ಯಾಣಾಧಿಕಾರಿ ಪವಿತ್ರ ದಿನೇಶ್ ಹೇಳಿದರು.
ನಗರದ ಹೊರವಲಯದಲ್ಲಿರುವ ಪೋದಾರ್ ಜಂಡೋ ಕಿಡ್ಸ್ನಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಮಕ್ಕಳು ಆಂಗ್ಲಭಾಷೆ ಕಲಿಯುವ ಜತೆಗೆ ಮಾತೃಭಾಷೆಗೆ ಹೆಚ್ಚಿನ ಮಹತ್ವ ನೀಡಬೇಕು. ಈ ಬಗ್ಗೆ ಶಿಕ್ಷಕರು ಶಾಲೆಗಳಲ್ಲಿ ಮಕ್ಕಳಿಗೆ ತಿಳಿಸುವ ಅಗತ್ಯವಿದೆ ಎಂದರು.
ಮಕ್ಕಳು ಪಠ್ಯ ಕಲಿಕೆ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಳ್ಳಬೇಕು. ಆಗ ಮಾತ್ರ ಪರಿಪೂರ್ಣ ಶಿಕ್ಷಣ ಕಲಿಯಲು ಸಾಧ್ಯವಾಗುತ್ತದೆ ಎಂದರು.
ಗೌರವ ಅತಿಥಿಗಳಾಗಿ ಪಾಲ್ಗೊಂಡಿದ್ದ ಅರವಿಂದ ಇಂಟರ್ ನ್ಯಾಷನಲ್ ಶಾಲೆಯ ಪ್ರಾಚಾರ್ಯರಾದ ಸರಸ್ವತಿ ವಿ. ಅವರು ಮಾತನಾಡಿ, ಮಕ್ಕಳಲ್ಲಿ ಮೊದಲು ಆತ್ಮಸ್ಥೆöÊರ್ಯ ಬೆಳೆಸಬೇಕು. ಆಗ ಮಾತ್ರ ಭವಿಷ್ಯದ ದಿನಗಳಲ್ಲಿ ಎಂತಹ ಕ್ಲಿಷ್ಟಕರ ಸಂದರ್ಭ ಎದುರಾದರೂ ಎದೆಗುಂದದೆ, ಅಧೀರರಾಗದೆ ಪರಿಸ್ಥಿತಿಯನ್ನು ಎದುರಿಸುವ ಮತ್ತು ನಿಭಾಯಿಸುವಂತಾಗುತ್ತಾರೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪೋದಾರ್ ಶಾಲೆಯ ಡಾ. ಎಂ.ಬಿ. ಲವ ಮಾತನಾಡಿ, ಮಕ್ಕಳನ್ನು ಉತ್ತಮ ಪ್ರಜೆಯನ್ನಾಗಿ ಮಾಡಲು ಪೋಷಕರ ಪಾತ್ರ ಬಹುಮುಖ್ಯವಾಗಿದೆ. ಹಾಗೆಯೇ ಶಿಕ್ಷಕರ ಪಾತ್ರ ಅಷ್ಟೇ ಪ್ರಮುಖವಾಗಿದೆ ಎಂದು ಹೇಳಿದರು.
ಪೋದಾರ್ ಜಂಬೋ ಕಿಡ್ಸ್ ಮುಖ್ಯೋಪಾಧ್ಯಾಯರಾದ ಯಲ್ಲಮ್ಮ ಉಪ್ಪಿನ್ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಪೋದಾರ್ ಜಂಬೋ ತನ್ನ ಹೆಸರನ್ನು ಬದಲಾಯಿಸಿ ಪೋದಾರ್ ಪ್ರೆಪ್ ಎಂಬ ಹೊಸ ಹೆಸರನ್ನು ಪಡೆಯಲಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಡಾ. ಎಂ.ಬಿ. ಲವ ಅವರು ಪೋದಾರ್ ಪ್ರೆಪ್ ವಿಡಿಯೋ ಬಿಡುಗಡೆ ಮಾಡಿದರು.
ನಂತರ ಮಕ್ಕಳು ಕಾಡಿನ ಜಂಬೋ ಮಿತ್ರರು ಎಂಬ ಥೀಮ್‌ನ್ನು ಆಧರಿಸಿ ಸಾಂಸ್ಕöÈತಿಕ ಕಾರ್ಯಕ್ರಮವನ್ನು ನಡೆಸಿಕೊಡುವ ಮೂಲಕ ಪರಿಸರದ ಮಹತ್ವವನ್ನು ಸಾರಿದರು.
ವಿಜೃಂಭಣೆಯಿAದ ನಡೆದ ಪೋದಾರ್ ಜಂಬೋ ಕಿಡ್ಸ್ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮಕ್ಕಳಿಂದ ನಡೆದ ವಿವಿಧ ಸಾಂಸ್ಕöÈತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.
ಈ ಸಂದರ್ಭದಲ್ಲಿ ಪೋಷಕರು, ವಿದ್ಯಾರ್ಥಿಗಳು, ಪೋದಾರ್ ಶಾಲೆಯ ಆಡಳಿತ ಮಂಡಳಿಯವರು, ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments